ಬೆಂಗಳೂರು:
ಬಹು ನಿರೀಕ್ಷಿತ ವಿರೋಧ ಪಕ್ಷದ ನಾಯಕ ಮತ್ತು ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಸ್ಥಾನಗಳ ಕುರಿತು ಬುಧವಾರದಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಮತ್ತು ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದರು.
ಕೇಂದ್ರದ ನಾಯಕರು ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕರು ಮತ್ತು ನಾಯಕರ ಅಭಿಪ್ರಾಯವನ್ನು ತೆಗೆದುಕೊಂಡಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದರು.
ವೀಕ್ಷಕರಾಗಿ ರಾಜ್ಯಕ್ಕೆ ಬಂದಿರುವ ಬಿಜೆಪಿಯ ಹಿರಿಯ ನಾಯಕರಾದ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಪಕ್ಷದ ಹೈಕಮಾಂಡ್‌ಗೆ ತಮ್ಮ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಮೂಲಗಳು ವಿವರಿಸಿವೆ. ಮಂಗಳವಾರ ತಡರಾತ್ರಿಯವರೆಗೂ ವೀಕ್ಷಕರು ಪ್ರತಿ ಶಾಸಕರು ಮತ್ತು ಪಕ್ಷದ ಮುಖಂಡರ ಅಭಿಪ್ರಾಯವನ್ನು ಪಡೆದರು.