ನವ ದಹಳ್ಳಿ: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿ ಕೊಡಾಜೆ ಮುಹಮ್ಮದ್ ಶರೀಫ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಿಲ್ಲಿ ವಿಮಾನ ನಿಲ್ದಾಣದಿಂದ ಶುಕ್ರವಾರ ಬಂಧಿಸಿದೆ.
ಕೊಡಾಜೆ ಮುಹಮ್ಮದ್ ಶರೀಫ್ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಅವರು ಬಹ್ರೈನ್‌ನಿಂದ ಇಲ್ಲಿನ ಇಂದಿರಾ ಗಾಂಧಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಬಂಧಿಸಲಾಗಿದೆ ಎಂದು ಎನ್‌ಐಎಯ ಹೇಳಿಕೆ ತಿಳಿಸಿದೆ.
ಶರೀಫ್ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯರಾಗಿದ್ದರು ಎಂದು ಅದು ಹೇಳಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ 2022 ಜುಲೈ 26ರಂದು ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಪಿಎಫ್‌ಐ ಸದಸ್ಯರು ಹತ್ಯೆಗೈದಿದ್ದರು ಎಂದು ಆರೋಪಿಸಲಾಗಿದೆ