Home ರಾಜಕೀಯ BJP Legislature Party meeting today | ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ

BJP Legislature Party meeting today | ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ

44
0
BJP government in four states Nalin Kumar confident1

ಬೆಂಗಳೂರು:

ವಿಧಾನ ಮಂಡಲ ಉಭಯ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಸಂಬಂಧ ಇಂದು ಬಿಜೆಪಿಯ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕ ಯಾರಾಗಲಿದ್ದಾರೆಂಬ ಕುತೂಹಲ ಸೃಷ್ಟಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ. ಇದು ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ದಿಢೀರ್ ಬೆಳವಣಿಗೆಯಲ್ಲಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಬೆನ್ನಲ್ಲೆ ಪ್ರತಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.

ಇಂದು ಸಂಜೆ 6 ಗಂಟೆಗೆ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಿದ್ದು, ಪಕ್ಷದ ಎಲ್ಲ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ತಪ್ಪದೇ ಭಾಗವಹಿಸಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು ಆಗಮಿಸಲಿದ್ದು, ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಪ್ರಕಟಿಸುವ ಸಾಧ್ಯತೆಗಳಿವೆ.

ಡಿಸೆಂಬರ್ 4ರಿಂದ ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, ಅದಕ್ಕೂ ಮೊದಲೇ ಉಭಯ ಸದನಗಳಲ್ಲಿ ಪ್ರತಿಪಕ್ಷ ನಾಯಕರ ಆಯ್ಕೆ ಮಾಡಬೇಕಿದೆ. ಅದಕ್ಕಾಗಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಚೊಚ್ಚಲ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ದಿಲ್ಲಿಯಿಂದ ಹೈಕಮಾಂಡ್ ಪ್ರತಿನಿಧಿಗಳಾಗಿ ಇಬ್ಬರು ನಾಯಕರು ವೀಕ್ಷಕರಾಗಿ ಆಗಮಿಸಲಿದ್ದಾರೆಂದು ಹೇಳಲಾಗಿದೆ. ಆದರೆ, ಯಾರನ್ನು ಕಳುಹಿಸಲಿದ್ದಾರೆಂಬ ಬಗ್ಗೆ ಮಾಹಿತಿ ಇಲ್ಲ. ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‍ರನ್ನು ಸಮರ್ಥವಾಗಿ ಎದುರಿಸಬಲ್ಲ ವ್ಯಕ್ತಿ ಯಾರು ಎಂಬುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here