ಬೆಂಗಳೂರು:
ಕೆಲವು ದಿನಗಳ ಹಿಂದೆ ಕ್ಷೇತ್ರದ ನೀರಾವರಿ ವಿಚಾರಗಳ ಬಗ್ಗೆ ಚರ್ಚಿಸಲು ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿದ್ದೆ ಎಂದಿದ್ದ ಲಿಂಗಾಯತ ಸಮುದಾಯದ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಇದೀಗ ಯಡಿಯೂರಪ್ಪರನ್ನು ಬಿಜೆಪಿಯಲ್ಲಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಟ್ವೀಟ್ಮಾಡಿ ಅದನ್ನು ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ @BSYBJP ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ.
— M B Patil (@MBPatil) July 19, 2021
@BJP4India May face the wrath of Lingayats, if they ill treat Tall leader @CMofKarnataka @bsybjp.@bjp4india shd value contribution of @bsybjp, & treat him with with dignity
— M B Patil (@MBPatil) July 19, 2021
This is my personal opinion, understanding that the proposed changes maybe internal matters of the BJP.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಡಿಯೂರಪ್ಪ ನಡೆಸಿಕೊಳ್ಳುತ್ತಿರುವ ರೀತಿ ಸರಿಯಿಲ್ಲ.ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕೊಡುಗೆ ಅಪಾರವಾಗಿದೆ.ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣ.ಸಿಎಂ ಮುಂದೂವರೆಸುವುದು ಬದಲಾವಣೆ ಮಾಡುವುದು ಅವರ ಪಕ್ಷಕ್ಕೆ ಬಿಟ್ಟಿದ್ದು.ಆದ್ರೆ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಿಲ್ಲ.