ಬೆಂಗಳೂರು:
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿಗಳೂ ಆದ ಶ್ರೀ ಅರುಣ್ ಸಿಂಗ್ ಅವರು 16-6-2021ರಂದು ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದು, ಅವರ ಪ್ರವಾಸ ವಿವರ ಹೀಗಿದೆ.
ಅಂದು ಮಧ್ಯಾಹ್ನ 3.30ಕ್ಕೆ ಅವರು ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.20ಕ್ಕೆ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳುವ ಅವರು, ಬಳಿಕ 4.45ಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ತೆರಳುವರು. ಅಲ್ಲಿ 5 ಗಂಟೆಗೆ ರಾಜ್ಯದ ಸಚಿವರ ಜೊತೆ ಸಭೆ ನಡೆಸುವರು. ರಾತ್ರಿ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಇರಲಿದ್ದಾರೆ.