Home ಬೆಂಗಳೂರು ನಗರ ಅರುಣ್ ಸಿಂಗ್ ಗೆ ಬಿಜೆಪಿ ಕಾರ್ಯಾಲಯದಲ್ಲಿ ಅದ್ದೂರಿ ಸ್ವಾಗತ

ಅರುಣ್ ಸಿಂಗ್ ಗೆ ಬಿಜೆಪಿ ಕಾರ್ಯಾಲಯದಲ್ಲಿ ಅದ್ದೂರಿ ಸ್ವಾಗತ

56
0
Advertisement
bengaluru

ಬೆಂಗಳೂರು:

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರವನ್ನು ನಗರದ ಬಿಜೆಪಿ ಕಚೇರಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ರಾಜ್ಯದ ಉಸು ವಾರಿಗಳಾದ ಬಳಿಕ ಮೊದಲ ಬಾರಿಗೆ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿದ ಅವರನ್ನು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು.

BJP Arun Singh

ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಪ್ರಮುಖ ಪದಾಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತ ಕೋರಿದರು. ನಂತರ ಕಾರ್ಯಾಲಯಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೪ನೇ ಪರಿನಿರ್ವಾಣ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

bengaluru bengaluru

ಈ ಸಂದರ್ಭದಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಾಣ, ಸಚಿವ ಕೆ.ಗೋಪಾಲಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್, ಸಿದ್ದರಾಜು, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಭಾರತಿ ಶೆಟ್ಟಿ, ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲು ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.


bengaluru

LEAVE A REPLY

Please enter your comment!
Please enter your name here