Home ರಾಜಕೀಯ ಬಿಜೆಪಿ ಎಂದರೆ ಬ್ಲಾಕ್ ಮೇಲರ್ಸ್ ಜನತಾ ಪಕ್ಷ; ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬಿಜೆಪಿ ಎಂದರೆ ಬ್ಲಾಕ್ ಮೇಲರ್ಸ್ ಜನತಾ ಪಕ್ಷ; ಡಿ.ಕೆ. ಶಿವಕುಮಾರ್ ವ್ಯಂಗ್ಯ

42
0
Advertisement
bengaluru

ಬೆಂಗಳೂರು:

‘ಬಿಜೆಪಿ ಎಂದರೆ ಬ್ಲಾಕ್ ಮೇಲರ್ಸ್ ಜನತಾ ಪಕ್ಷ. ಹಾಗೆಂದು ಆ ಪಕ್ಷದ ನಾಯಕರೇ ಹೇಳಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಬ್ಲಾಕ್ ಮೇಲ್, ಲಂಚದ ಆರೋಪ ಕೇಳಿ ಬಂದಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಇದರ ನೈತಿಕ ಹೊಣೆ ಹೊರಬೇಕಿದೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಸಂಪುಟ ವಿಸ್ತರಣೆ ಮಾಡಿದ್ದಾರೆ. ಸಂಪುಟಕ್ಕೆ ಯಾರನ್ನು ಬೇಕಾದರೂ ಸೇರಿಸಿಕೊಳ್ಳಬಹುದು, ಅದಕ್ಕೆ ನಮ್ಮ ಯಾವ ಅಭ್ಯಂತರವೂ ಇಲ್ಲ ಎಂದರು.

ಬ್ಲಾಕ್ ಮೇಲರ್ ಗಳು, ಲಂಚ ನೀಡಿರುವವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಬಿಜೆಪಿ ಪಕ್ಷದ ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರು, ಶಾಸಕರು ಆರೋಪ ಮಾಡಿದ್ದಾರೆ. ಸಿ.ಡಿ. ಬಗ್ಗೆಯೂ ಬಿಜೆಪಿ ನಾಯಕರು ಪ್ರಸ್ತಾಪಿಸಿದ್ದಾರೆ. ಸಿಡಿಯಲ್ಲಿ ಏನಿದೆ ಎಂಬುದು ಅದನ್ನು ನೋಡಿ, ಚರ್ಚೆ ಮಾಡಿರುವ ಬಿಜೆಪಿಯವರಿಗೆ ಗೊತ್ತಿದೆ ಎಂದರು. UNI

bengaluru bengaluru

bengaluru

LEAVE A REPLY

Please enter your comment!
Please enter your name here