ಬೆಂಗಳೂರು: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.