ಬೆಂಗಳೂರು:
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ.
ಈ ಸಭೆಯನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ವೆಬೆಕ್ಸ್ ಮೂಲಕ ಉದ್ಘಾಟಿಸಿದರು.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ವೆಬೆಕ್ಸ್ ಮೂಲಕ ಮಾರ್ಗದರ್ಶನ ನೀಡುತ್ತಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಶ್ರೀ @nalinkateel ಮತ್ತು ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿಗಳೂ ಆಗಿರುವ ಶ್ರೀ @ArunSinghbjp ರವರ ವರ್ಚುವಲ್ ಸಮಕ್ಷಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಇಂದು ಉದ್ಘಾಟಿಸಲಾಯಿತು. ಸಭೆಯಲ್ಲಿ ಹಿರಿಯ ನಾಯಕರುಗಳು, ಪದಾಧಿಕಾರಿಗಳು ಭಾಗವಹಿಸಿದ್ದಾರೆ.@BJP4Karnataka pic.twitter.com/pOo1FmKWSM
— B.S. Yediyurappa (@BSYBJP) June 26, 2021
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ರಾಜ್ಯ ಉಸ್ತುವಾರಿ ಶ್ರೀ @ArunSinghbjp, ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ವರ್ಚುವಲ್ ಉಪಸ್ಥಿತಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿದರು.
— BJP Karnataka (@BJP4Karnataka) June 26, 2021
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ @arunbpbjp, ಸಚಿವರು, ಶಾಸಕರು & ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು. pic.twitter.com/CWy4hZ2q3C
ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್ ಅವರು ಪಾಲ್ಗೊಂಡಿದ್ದರು.. ರಾಜ್ಯದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಪಕ್ಷದ ಕಾರ್ಯ ಚಟುವಟಿಕೆಗಳ ಕುರಿತು ಸಭೆಯು ಚರ್ಚೆ ನಡೆಸಲಿದೆ.