ಬೆಂಗಳೂರು:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿಗಳೂ ಆದ ಅರುಣ್ ಸಿಂಗ್‍ರವರು ಆಗಸ್ಟ್ 30 ರಂದು ಸಂಜೆ 5:40ಕ್ಕೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೈಸೂರಿಗೆ ತೆರಳಲಿದ್ದಾರೆ, ಬಳಿಕ ಮೈಸೂರಿನ ಸರ್ಕಾರಿ ಗೆಸ್ಟ್ ಹೌಸ್‍ನಲ್ಲಿ ವಾಸ್ತವ್ಯ ಇರಲಿದ್ದಾರೆ.
ಆಗಸ್ಟ್ 31 ರಂದು ಬೆಳಿಗ್ಗೆ 8:00 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವ ಅವರು ಬಳಿಕ ಮೈಸೂರು, ಮೈಸೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ, ಜಿಲ್ಲಾ ಕೋರ್ ಕಮಿಟಿ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲಿದ್ದಾರೆ.
ಸೆಪ್ಟೆಂಬರ್ 1 ರಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆಯು ಚನ್ನರಾಯಪಟ್ಟಣದಲ್ಲಿ ನಡೆಯಲಿದ್ದು, ಜಿಲ್ಲಾ ಕೋರ್‍ಕಮಿಟಿ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸೆಪ್ಟೆಂಬರ್ 2 ರಂದು ಬೆಂಗಳೂರಿನ ಮಲ್ಲೇಶ್ವರದ ಹವ್ಯಾಕರ ಭವನದಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಯ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2:45ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ ಅಲ್ಲಿ ಅವರು ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು, ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತಲುಪಿ ಕೆ.ಕೆ. ಗೆಸ್ಟ್ ಹೌಸ್‍ನಲ್ಲಿ ವಾಸ್ತವ್ಯ ಇರಲಿದ್ದಾರೆ.
ಸೆಪ್ಟೆಂಬರ್ 3 ರಂದು ಬೆಳಿಗ್ಗೆ 7:15ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು ಅವರು ತಿಳಿಸಿದ್ದಾರೆ.