Home ಬೆಂಗಳೂರು ನಗರ ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ

ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ

63
0
BJP state office bearers meeting on August 25
Advertisement
bengaluru

ಬೆಂಗಳೂರು:

ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯನ್ನು ದಿನಾಂಕ 25.08.2021ರ ಬುಧವಾರ ಮಂಡ್ಯದ “ಸುಮಾರವಿ ಕಲ್ಯಾಣ ಮಂಟಪ”ದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10.30 ಗಂಟೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ದುಶ್ಯಂತ್ ಕುಮಾರ್ ಗೌತಮ್ ಅವರು ಈ ಸಭೆಯನ್ನು ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯ ನಂತರ ನಡೆದಿರುವ ಸಂಘಟನಾತ್ಮಕ ಚಟುವಟಿಕೆಗಳು, ಕೋವಿಡ್ 3ನೇ ಅಲೆಯ ಕುರಿತಾಗಿ ನಡೆದಿರುವ ತಯಾರಿ, ಪಕ್ಷದ ಸಂಘಟನೆ, ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳ ಬಗ್ಗೆ, ಮುಂದಿನ ಕಾರ್ಯಯೋಜನೆ, ವರದಿಗಳು ಹಾಗೂ ಮೋರ್ಚಾಗಳ ಚಟುವಟಿಕೆಗಳ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯ ಮುಖ್ಯ ವಕ್ತಾರರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ.

bengaluru bengaluru

bengaluru

LEAVE A REPLY

Please enter your comment!
Please enter your name here