Home ಬೆಂಗಳೂರು ನಗರ ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ- ಅರುಣ್ ಸಿಂಗ್

ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ- ಅರುಣ್ ಸಿಂಗ್

54
0
BJP to bag power again in Karnataka: Arun Singh

ಬೆಂಗಳೂರು:

ಕರ್ನಾಟಕದ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಶ್ರೀ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಾಲ್ಕು ದಿನಗಳ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಆಗಮಿಸಿದ ಅವರು, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ರಾಜ್ಯ ಸರಕಾರವು ಉತ್ತಮವಾಗಿ ಕೆಲಸ ಮಾಡುತ್ತಿದ್ದು, 2023ರಲ್ಲೂ ಅಧಿಕಾರ ಗಳಿಸಲಿದೆ ಎಂದರು.

ಮಂಡ್ಯ ಮತ್ತು ಮೈಸೂರಿನಲ್ಲಿ ಈ ಬಾರಿ ಪ್ರವಾಸ ಮಾಡುವುದಾಗಿ ಅವರು ತಿಳಿಸಿದರು. ಪಕ್ಷದ ರಾಜ್ಯ ಉಪಾಧ್ಯಕ್ಷರಾದ ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಪಕ್ಷದ ಪದಾಧಿಕಾರಿಗಳು, ಮುಖಂಡರು ಇದ್ದರು.

LEAVE A REPLY

Please enter your comment!
Please enter your name here