ಬೆಂಗಳೂರು:
ಪಕ್ಷದ ವಿರುದ್ಧ ಯಾರೂ ಮಾತನಾಡಬಾರದು. ಪಕ್ಷಕ್ಕೆ ನಷ್ಟ ಉಂಟಾಗುವ ರೀತಿಯಲ್ಲಿ ಎರಡರಿಂದ ಮೂರು ಜನರು ಕೆಲಸ ಮಾಡುತ್ತಿದ್ದಾರೆ. ಅಂಥ ಕೆಲವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ಇಂದು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಪಕ್ಷದ ವಿರುದ್ಧ ಮಾತನಾಡುವವರಿಗೆ ಹಾಗೆ ಮಾಡದಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ @CTRavi_BJP, ರಾಜ್ಯ ಸಹ ಉಸ್ತುವಾರಿ ಶ್ರೀಮತಿ @aruna_dk, ಕೇಂದ್ರ ಸಚಿವರಾದ ಶ್ರೀ @JoshiPralhad, ಶ್ರೀ @DVSadanandGowda, ಉಪಮುಖ್ಯಮಂತ್ರಿಗಳಾದ ಶ್ರೀ @GovindKarjol, ಶ್ರೀ @drashwathcn, ಶ್ರೀ @LaxmanSavadi,
— BJP Karnataka (@BJP4Karnataka) June 18, 2021
2/3 pic.twitter.com/bmkpX2LY7t
ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷವಾಗಿದೆ. ಪಕ್ಷದ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡಬೇಕು. ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರ ವಿಫಲತೆಗಳ ಕುರಿತು ಮಾತನಾಡಬೇಕು ಎಂದರು.
ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಅವುಗಳ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ನಮ್ಮ ಪಕ್ಷದ ಮುಖಂಡರು ಮುಂದಾಗಬೇಕು ಎಂದು ಅವರು ಸೂಚಿಸಿದರು.