ಬೆಂಗಳೂರು:
ಫೆಬ್ರವರಿ ಹೊತ್ತಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ರಾಜ್ಯ ಹೈ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಇದೇ ವೇಳೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನ್ಯಾಯಾಲಯದ ಆದೇಶವನ್ನು ಸುಪ್ರೀಂಕೋರ್ಟ್ ನ ಲ್ಲಿ ಪ್ರಶ್ನೆ ಮಾಡಬೇಕಾ? ಇಲ್ಲವಾ ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಗುವುದು.ಇರುವ ಎಲ್ಲ ಸಾಧ್ಯತೆ ಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಬಿಬಿಎಂಪಿಗೆ ಪ್ರತ್ಯೇಕ ಕಾಯ್ದ ಆಗಬೇಕು ಎನ್ನುವುದು ನಮ್ಮ ಬಯಕೆ.ಅದನ್ನು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೇವೆ.ಅದಕ್ಕಾಗಿ ನಾವು ಪ್ರತಿಪಕ್ಷದ ಜೊತೆ ಚರ್ಚಿಸುತ್ತೇವೆ.ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ.
ಇದನ್ನೂ ಓದಿ: 6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ; ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ https://kannada.thebengalurulive.com/hc-orders-overdue-bbmp-polls/