ಬಾಗಲಕೋಟೆ:
ಬಿಜೆಪಿ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಇಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಬಿಜೆಪಿಯೊಳಗೆ ಬ್ರಾಹ್ಮಣರನ್ನು ಸಿಎಂ ಮಾಡುವ ಕೆಲಸ ಸದ್ದಿಲ್ಲದೆ ನಡೆದಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ ಎಂದು ಆರೋಪಿಸಿದರು.
ಪ್ರಧಾನಿ ಸೇರಿದಂತೆ ಕೇಂದ್ರದ ಹಲವು ನಾಯಕರು ಚುನಾವಣೆ ಬಳಿಕ ರಾಜ್ಯಕ್ಕೆ ಟಾಟಾ ಮಾಡಿ ಹೋಗುತ್ತಾರೆ. ಮುಂದೆ ಲೋಕಸಭಾ ಚುನಾವಣೆಗೆ ಬರುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.