ಬೆಂಗಳೂರು:
ಹಿಂದೆ ಸಂಸದರಾಗಿದ್ದ ಮತ್ತು ರೈಲ್ವೆ ಸಚಿವರಾಗಿದ್ದ ಶ್ರೀ ಸುರೇಶ್ ಅಂಗಡಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಕಾರ್ಯವೈಖರಿಯಿಂದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳೂ ಆದ ಶ್ರೀ ಅರುಣ್ ಸಿಂಗ್ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹಿಂದಿಗಿಂತ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಬಾರಿಸಲಿದೆ. ಇಲ್ಲಿ ಸಂಸದರಾಗಿದ್ದ ಸರಳ ವ್ಯಕ್ತಿತ್ವದ ಶ್ರೀ ಸುರೇಶ್ ಅಂಗಡಿ ಅವರು ತಮ್ಮ ಕ್ಷೇತ್ರವನ್ನು ಅತ್ಯುತ್ತಮವಾಗಿ ಅಭಿವೃದ್ಧಿ ಪಡಿಸಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಯೋಜನೆಗಳಿಂದ ಇಲ್ಲಿ ಬಿಜೆಪಿ ಗೆಲುವು ಖಚಿತ ಎಂದು ನುಡಿದರು.
ಬೆಳಗಾವಿಯನ್ನು ಸ್ಮಾರ್ಟ್ ಸಿಟಿ, ಅಮೃತ್ ನಗರವಾಗಿ ಘೋಷಿಸುವುದರಲ್ಲಿ ಶ್ರೀ ಸುರೇಶ್ ಅಂಗಡಿಯವರ ಪಾತ್ರ ಮಹತ್ವದ್ದಾಗಿತ್ತು. ಈ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಅವರು ಪ್ರಮುಖ ಕೊಡುಗೆ ನೀಡಿದ್ದಾರೆ. ಇಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಮುಂದುವರೆಯಲು ಜನರು ಶ್ರೀಮತಿ ಮಂಗಳಾ ಅಂಗಡಿಯವರನ್ನು ಗೆಲ್ಲಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ ಅವರ ಸರಕಾರವು ರೈತಪರವಾಗಿ ಕೆಲಸ ಮಾಡುತ್ತಿವೆ. ಮಹಿಳಾ ಉದ್ಯಮಿಗಳಿಗೆÉ ಉತ್ತೇಜನ ನೀಡುವ ಬಜೆಟ್ ಮಂಡಿಸಿದ್ದಾರೆ. ರೈಲ್ವೆ ಯೋಜನೆಗೂ ಹೆಚ್ಚಿನ ಅನುದಾನ ನೀಡಿದ್ದು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.
5 ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಸ್ಸಾಂನಲ್ಲಿ ಬಿಜೆಪಿ ಸರಕಾರ ರಚನೆಯಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ವಿರೋಧಿ ಅಲೆ ಇದೆ. ಅಲ್ಲಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಜನರು ಬಿಜೆಪಿಯ 200ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎನ್.ಡಿ.ಎ ಸರಕಾರ ರಚನೆಯಾಗಲಿದೆ. ಕೇರಳದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಲಿದೆ ಎಂದು ತಿಳಿಸಿದರು.
ಶ್ರೀ ಯಡಿಯೂರಪ್ಪ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಶ್ರೀ ಈಶ್ವರಪ್ಪ ಅವರು ಹೇಳಿದ್ದಾರೆ ಎಂದು ಶ್ರೀ ಅರುಣ್ ಸಿಂಗ್ ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.
ದೇಶದಲ್ಲಿ ಬೆಲೆ ಏರಿಕೆ ಪ್ರಮಾಣ ನಿಯಂತ್ರಣದಲ್ಲಿದೆ. ಆದರೂ ಕಾಂಗ್ರೆಸ್ ಮುಖಂಡರು ಈ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ನಾಯಕರು ಹಿಂದೂ ವಿರೋಧಿಗಳಾಗಿ ಮತ್ತು ಭಾರತೀಯ ಸಂಸ್ಕøತಿಯ ಅವಹೇಳನ ಮಾಡುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ವಿಫಲ ನಾಯಕರಾಗಿ ಹೊರಹೊಮ್ಮಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರು ಷಡ್ಯಂತ್ರ ಮಾಡುವುದರಲ್ಲೇ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ಸಿಗರು ವಿನಾಶದತ್ತ ಮುನ್ನಡೆಯುತ್ತಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದು ಮಹಿಳೆಯರ ಮೇಲಿನ ಅತ್ಯಾಚಾರ ಹೆಚ್ಚಾಗಿದೆ, ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿವೆ. ಆದರೆ ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅತ್ಯುತ್ತಮವಾಗಿದೆ ಎಂದು ತಿಳಿಸಿದರು.
ಸಚಿವರಾದ ಶ್ರೀ ಉಮೇಶ್ ಕತ್ತಿ, ಶ್ರೀ ಶ್ರೀಮಂತಗೌಡ ಪಾಟೀಲ್, ರಾಜ್ಯ ರೈತ ಮೋರ್ಚಾ ಅಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಶ್ರೀ ಲಿಂಗರಾಜು ಪಾಟೀಲ್, ಶಾಸಕರಾದ ಶ್ರೀ ಅನಿಲ್ ಬೆಣಕೆ, ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ್, ನಗರ ಜಿಲ್ಲಾಧ್ಯಕ್ಷರಾದ ಶ್ರೀ ಶಶಿಕಾಂತ್ ಪಾಟೀಲ್, ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಶ್ರೀ ರಾಜೇಶ್ ನೇರ್ಲಿಗಿ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.