ಮುಂಚೆಯೇ ಪ್ಲಾನ್ ಮಾಡಿಕೊಂಡಿದ್ದ ಆರೋಪಿಗಳು; ಸಿಸಿ ಕ್ಯಾಮಾರಾಗಳನ್ನು ಮೇಲ್ಬಾಗಕ್ಕೆ ತಿರುಗಿಸಿ ಕೃತ್ಯ; ಕದಿರೇಶ್ ಬಾಡಿ ಗಾರ್ಡ್ ನಿಂದಲೆ ಕೊಲೆ ಅನುಮಾನ
ಬೆಂಗಳೂರು:
ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಮನೆಯ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ರೇಖಾ ಕದಿರೇಶ್ ಅವರು ಕೆಲಸ ಮಾಡುತ್ತಿರುವ ಕಚೇರಿಯ ಹೊರಗೆ ಈ ಘಟನೆ ನಡೆದಿದೆ.
ಪಾಲಿಕೆಯ ಮಾಜಿ ಸದಸ್ಯೆಯ ಹತ್ಯೆಯಾಗಿದೆ. ಮನೆಯೊಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದರು. ತೀವ್ರ ಸ್ವರೂಪದ ಗಾಯಗಳಾಗಿದ್ದ ರೇಖಾ ಕದಿರೇಶ್ ಅವರನ್ನು ಸ್ಥಳೀಯರು ಕೂಡಲೇ ಕೆಂಪೇಗೌಡ ಆಸ್ಪತ್ರೆಗೆ ದಾಖಲಿಸಲು ನೋಡಿದ್ದರೂ ದಾರಿಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಹಳೆ ರೌಡಿಶೀಟರ್ ಪೀಟರ್, ಸುರೇಶ್, ರಾಬರ್ಟ್ ಎಂಬವರು ಕೊಲೆ ನಡೆಸಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಚಿಕ್ಕಪೇಟೆ, ಕಾಟನ್ ಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೂರು ವರ್ಷಗಳ ಹಿಂದೆ ಪತಿಯೂ ಕೊಲೆ:
ಹಳೆ ವೈಷಮ್ಯದಿಂದ ರೇಖಾ ಅವರ ಹತ್ಯೆ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದ್ದು ಮೂರು ವರ್ಷಗಳ ಹಿಂದೆ 2018ರ ಫೆಬ್ರವರಿ 8 ರಂದು ರೇಖಾ ಅವರ ಪತಿ ಕದಿರೇಶ್ ಅವರನ್ನು ಸಹ ಇದೇ ರೀತಿ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದರು. ಪತಿಯನ್ನು ಕೊಂದ ಮೂರು ವರ್ಷಗಳ ನಂತರ ಪತ್ನಿಯ ಹತ್ಯೆಯನ್ನು ದುಷ್ಕರ್ಮಿಗಳು ನಡೆಸಿದ್ದಾರೆ.