Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿರುವುದರ ಹಿಂದೆ ಬಿಜೆಪಿಯವರ ಹೊಟ್ಟೆಕಿಚ್ಚು ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ರಾಜಕೀಯ
  • ಕರ್ನಾಟಕ
  • ಬೆಂಗಳೂರು ನಗರ

ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿರುವುದರ ಹಿಂದೆ ಬಿಜೆಪಿಯವರ ಹೊಟ್ಟೆಕಿಚ್ಚು ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

The Bengaluru Live August 20, 2024 1:20 PM 1 minute read
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಆಗಸ್ಟ್‌ 20: ರಾಜೀವಗಾಂಧಿ ಹಾಗೂ ದೇವರಾಜ ಅರಸರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿದರು.

ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ ಕನಸನ್ನು ಕಂಡಿದ್ದರು. ಯುವಜನತೆಯ ಮೇಲೆ ಅಪಾರ ವಿಶ್ವಾಸವಿಟ್ಟುಕೊಂಡಿದ್ದರು.

ಅವರು ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಕಾರಣಕರ್ತರಾಗಿದ್ದರು. ಯಾವಾಗಲೂ ಸಾಮಾಜಿಕ ನ್ಯಾಯದ ಪರವಿದ್ದರು. ದೇಶದಲ್ಲಿ ಬದಲಾವಣೆ ಆಗಬೇಕು. ಸಮಾನ ಅವಕಾಶ ಸಿಗಬೇಕು ಎಂದು ಹಂಬಲಿಸಿದರು. ಯಾವುದೇ ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಭೇದ ಮರೆತು, ಎಲ್ಲೇ ಇದ್ದರೂ ಭಾರತೀಯರು ಒಗ್ಗಟ್ಟಾಗಿರಬೇಕು ಎಂಬ ಕನಸನ್ನು ಕಂಡಿದ್ದರು.

ವಿಶೇಷವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪಾಲು ಸಿಗಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂವಿಧಾನಕ್ಕೆ 73 ಮತ್ತು 74 ನೇ ತಿದ್ದುಪಡಿ ಜಾರಿಗೆ ತಂದರು. ಈ ದೇಶದಲ್ಲಿ ಏನಾದರೂ ಮಹಿಳೆಯರಿಗೆ ರಾಜಕೀಯದಲ್ಲಿ ಪಾಲು ಸಿಕ್ಕಿದ್ದರೆ, ಸಂವಿಧಾನಕ್ಕೆ ತಂದ ಈ ತಿದ್ದುಪಡಿಗಳು ಕಾರಣ ಎಂದು ಹೇಳ ಬಯಸುತ್ತೇನೆ ಎಂದರು.

ಭಾರತೀಯ ಜನತಾ ಪಕ್ಷದವರು ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು , ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಯಿ ಮಾತೇ ಬೇರೆ, ಕೃತಿಯೇ ಬೇರೆ: ಇವತ್ತು ದೇಶದ ಸಂಪರ್ಕ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿಗೆ ರಾಜೀವ ಗಾಂಧಿಯವರು ಕಾರಣ. ರಾಜೀವ ಗಾಂಧಿಯವರು ಯುವ ಶಕ್ತಿ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಆದ್ದರಿಂದ ಮತದಾನದ ವಯಸ್ಸು 21 ರಿಂದ 18 ಕ್ಕೆ ಇಳಿಸಿದರು. ಅವರು ಇನ್ನೂ ಬದುಕಿರಬೇಕಾಗಿತ್ತು. ಅವರು ಇದ್ದಿದ್ದರೆ ದೇಶದಲ್ಲಿ ನಿಜವಾದ ಬದಲಾವಣೆ ಆಗಿರುತ್ತಿತ್ತು. ದೂರದೃಷ್ಟಿ, ದೇಶ, ಸಮಾಜದ ಬಗ್ಗೆ ಕಾಳಜಿ ಇದ್ದವರು, ಬಹಳ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನು ಅಗಲಿದರು ಎಂದು ವಿಷಾದಿಸಿದರು.

ದೇವರಾಜ ಅರಸು ಅವರು 1972 ರಿಂದ ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗದ ರಚನೆ ಮಾಡಿ, ಹಿಂದುಳಿದವರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು; ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನ ಸೌಧ ಪ್ರವೇಶಿಸುವಂತೆ ಮಾಡಿದರು ಎಂದರು.

ಈ ಕುರಿತು ಪತ್ರಿಕೆಯಲ್ಲಿ ಓದಿದ ಘಟನೆಯೊಂದನ್ನು ನೆನಪಿಸಿ ಕೊಂಡ ಮುಖ್ಯಮಂತ್ರಿಗಳು, “ಅರಸು ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಜಾಫರ್‌ ಷರೀಫ್‌ ಅವರಿಗೆ ಟಿಕೆಟ್‌ ಕೊಟ್ಟರು. ನಾಗರತ್ನಮ್ಮ ಅವರು ಜಟಕಾ ಗಾಡಿ ಓಡಿಸುವವರಿಗೆ ಟಿಕೆಟ್‌ ಕೊಡ್ತೀಯಲ್ಲ ಎಂದು ಕೇಳಿದರು. ನೋಡಮ್ಮಾ, ಇನ್ನು ಮೇಲೆ ಜಟಕಾ ಸಾಹೇಬರಿಗೆ, ಕ್ಷೌರ ಮಾಡುವವರಿಗೆ ಟಿಕೆಟ್‌ ಕೊಡೋದು, ಶೋಕಿ ಮಾಡುವವರಿಗಲ್ಲ ಎಂದು ಉತ್ತರಿಸಿದರಂತೆ” ಎಂದು ತಾವು ಓದಿದ್ದನ್ನು ಸ್ಮರಿಸಿದರು.

ಮಲ ಹೊರುವ ಪದ್ಧತಿ, ಜೀತ ಪದ್ಧತಿ ನಿಷೇಧ, ಸಾಲ ಮನ್ನಾ ಇಂತಹ ಅನೇಕ ಪ್ರಗತಿ ಪರ ಕಾನೂನುಗಳನ್ನು ಮಾಡಿದ ಅವರು, ಅರಸು ಮನೆತನದಲ್ಲಿ ಹುಟ್ಟಿದರೂ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದರು.

ಅಂತೆಯೇ ಕಾಂಗ್ರೆಸ್‌ ಪಕ್ಷ ಅಸಮಾನತೆಯನ್ನು ಹೋಗಲಾಡಿಸಲು ಬಯಸುತ್ತದೆ. ಈಗಲೂ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತಿದೆ. ಅದಕ್ಕೆ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಅಸಮಾನತೆ ವಿರುದ್ಧ ಕಾರ್ಯಕ್ರಮ ನೀಡುತ್ತೇನೆಂಬ ಕಾರಣಕ್ಕೇ ಬಿಜೆಪಿ ನನ್ನನ್ನು ಸಹಿಸುತ್ತಿಲ್ಲ ಎಂದು ತಿಳಿಸಿದರು.

ಈಗ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಕ್ಕೆ ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ. ಜಾರ್ಜ್‌, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಮತ್ತಿತರರು ಭಾಗವಹಿಸಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: Muda Scam | ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
Next: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಬಂದರೆ ಮುಲಾಜಿಲ್ಲದೆ ಬಂದಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.