Home ರಾಜಕೀಯ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ 5,240 ಮತಗಳ ಅಂತರದಿಂದ ಗೆಲವು

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ 5,240 ಮತಗಳ ಅಂತರದಿಂದ ಗೆಲವು

84
0

ಬೆಂಗಳೂರು:

ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿಯ ಹಣಾಹಣಿಗೆ ಸಾಕ್ಷಿಯಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ 5,240 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಮಂಗಲಾ ಸುರೇಶ ಅಂಗಡಿ ಅವರು 4,40,327 ಮತಗಳನ್ನು ಪಡೆದಿದ್ದರೆ ಸತೀಶ ಜಾರಕಿಹೊಳಿ ಅವರು 4,35,087 ಮತಗಳನ್ನು ಪಡೆದರು.

ಎಣಿಕೆಯನ್ನು ಒಟ್ಟಾರೆಯಾಗಿ 89 ಸುತ್ತುಗಳಲ್ಲಿ ಮಾಡಲಾಯಿತು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ‌ ಚುನಾವಣೆಯಲ್ಲಿ 10.16 ಲಕ್ಷ ಮತದಾನ ಆಗಿತ್ತು. ಕೋವಿಡ್ ಕಾರಣದಿಂದಾಗಿ ಕಡಿಮೆ ಸಿಬ್ಬಂದಿ ನಿಯೋಜಿಸಿರುವುದರಿಂದಾಗಿ ಮತ ಎಣಿಕೆಯ ವೇಗ ಹಿಂದಿನ ಚುನಾವಣೆಗಳ ಮತ ಎಣಿಕೆಯಷ್ಟು ಪ್ರಮಾಣದಲ್ಲಿಲ್ಲ.

ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಸಲಾಯಿತು. ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿತ್ತು.

LEAVE A REPLY

Please enter your comment!
Please enter your name here