Home ರಾಜಕೀಯ ಕೇಂದ್ರ ಸಮಿತಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ: ಸಿ.ಟಿ.ರವಿ

ಕೇಂದ್ರ ಸಮಿತಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ: ಸಿ.ಟಿ.ರವಿ

70
0
BJP core committee meeting
Advertisement
bengaluru

ಬೆಂಗಳೂರು:

ನಗರದಲ್ಲಿ ಇಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಅಭ್ಯರ್ಥಿಗಳ ಕುರಿತು ಚರ್ಚಿಸಿದ್ದು, ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ರಾಜ್ಯಾಧ್ಯಕ್ಷರು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ತಮಿಳುನಾಡು ರಾಜ್ಯದ ಪಕ್ಷದ ಉಸ್ತುವಾರಿಗಳೂ ಆದ ಶ್ರೀ ಸಿ.ಟಿ.ರವಿ ಅವರು ತಿಳಿಸಿದರು.

ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ, ಮೀಸಲಾತಿ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಪ್ರಚಲಿತ ರಾಜಕೀಯ ಕುರಿತು ಚರ್ಚಿಸಲಾಗಿದೆ. ಬಿಜೆಪಿಯನ್ನು ಏಪ್ರಿಲ್ 6ರಂದು ಸ್ಥಾಪಿಸಲಾಯಿತು. ಏಪ್ರಿಲ್‍ನಲ್ಲಿ ಪಕ್ಷವು 41 ವರ್ಷಗಳನ್ನು ಪೂರೈಸಲಿದೆ. ಈ ಸಂಬಂಧ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳನ್ನೂ ಚರ್ಚಿಸಿದೆವು ಎಂದು ಅವರು ವಿವರಿಸಿದರು.

BJP core committee meeting CM 1

ಮಸ್ಕಿಯಲ್ಲಿ ಶ್ರೀ ಪ್ರತಾಪಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಅಜ್ಞಾತ ವಾಸ ಅನುಭವಿಸಿದ್ದಾರೆ. ಅಲ್ಲಿನ ಟಿಕೆಟ್, ಬೆಳಗಾವಿಯಲ್ಲಿ ಅಂಗಡಿಯವರ ಕುಟುಂಬಕ್ಕೆ ಟಿಕೆಕ್ ಕೊಡುವ ಕುರಿತಂತೆ ಕೇಂದ್ರದ ನಿರ್ಧಾರವನ್ನು ಕಾದುನೋಡೋಣ ಎಂದು ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.

bengaluru bengaluru

ತಮಿಳುನಾಡು ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಶ್ರೀ ಕೆ.ಅಣ್ಣಾಮಲೈ, ಶ್ರೀಮತಿ ಖುಷ್ಬೂ ಸೇರಿದಂತೆ ಅನೇಕರು ಸ್ಪರ್ಧೆಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಕಾರ್ಯಕ್ರಮದ ಆಧಾರದಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಳವಣಿಗೆಗೆ ಪೂರಕವಾದ ಫಲಿತಾಂಶ ಬರಲಿದೆ ಎಂದು ತಿಳಿಸಿದರು.

2016ರಲ್ಲೂ ಡಿಎಂಕೆಯವರು ಅಧಿಕಾರ ಖಚಿತ ಎಂಬ ವಿಶ್ವಾಸದಲ್ಲಿದ್ದರು. ಆದರೆ, ಅಧಿಕಾರ ಸಿಗಲಿಲ್ಲ. ಈಗಲೂ ಅದೇ ನಿರೀಕ್ಷೆ ಅವರಲ್ಲಿದೆ. ಆದರೆ, ಗೂಂಡಾ ರಾಜಕೀಯ ಮಾಡುವ ಡಿಎಂಕೆಯನ್ನು ಜನರು ತಿರಸ್ಕರಿಸಲಿದ್ದಾರೆ. ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಹೇಳಿದರು.


bengaluru

LEAVE A REPLY

Please enter your comment!
Please enter your name here