ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‌ಕುಮಾರ್ ಕಟೀಲ್ ಅವರು ಬುಧವಾರ, ರಾಜ್ಯ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶ್ರೀ ತುಳಸಿ ಮುನಿರಾಜು ಗೌಡ ಅವರಿಗೆ ಬಿ ಫಾರಂ ವಿತರಿಸಿದರು.
ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಶ್ರೀ ಕಟೀಲ್ ಅವರು ಬಿ ಫಾರಂ ನೀಡಿ ಶುಭ ಕೋರಿದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರವಿಕುಮಾರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಲೋಕೇಶ್ ಅಂಬೆಕಲ್ಲು, ರಾಜ್ಯ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಪಕ್ಷದ ಪದಾಧಿಕಾರಿಗಳು ಇದ್ದರು.
ಮಾ.4ರಂದು ತುಳಸಿ ಮುನಿರಾಜು ನಾಮಪತ್ರ ಸಲ್ಲಿಕೆ
ತುಳಸಿ ಮುನಿರಾಜು ಗೌಡ ಅವರು 4 ಮಾರ್ಚ್ ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸೌಧದ ಮೊದಲನೇ ಮಹಡಿಯ ವಿಧಾನಸಭೆಯ 119ನೇ ಕೊಠಡಿಯಲ್ಲಿ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಅಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಸಚಿವರು, ಸಂಸದರು, ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.