Home ಬೆಂಗಳೂರು ನಗರ BMS Trust: ಉದ್ಯಮಿ ದಯಾನಂದ ಪೈ ಹಾಗೂ ಸಚಿವ ಅಶ್ವತ್ಥನಾರಾಯಣ ಮಾತುಕತೆಯಲ್ಲಿ ತೊಡಗಿರುವ ಫೋಟೋ ಬಿಡುಗಡೆ...

BMS Trust: ಉದ್ಯಮಿ ದಯಾನಂದ ಪೈ ಹಾಗೂ ಸಚಿವ ಅಶ್ವತ್ಥನಾರಾಯಣ ಮಾತುಕತೆಯಲ್ಲಿ ತೊಡಗಿರುವ ಫೋಟೋ ಬಿಡುಗಡೆ ಮಾಡಿದ ಹೆಚ್‌ಡಿ ಕುಮಾರಸ್ವಾಮಿ

91
0
BMS Trust: HD Kumaraswamy Releases Photo of Businessman Dayananda Pai and Minister Ashwatthanarayan in Talks

ಬೆಂಗಳೂರು:

ಬಿಎಂಎಸ್ ಟ್ರಸ್ಟ್ ಅನ್ನು ಹೈಜಾಕ್ ಮಾಡುತ್ತಿರುವ ಉದ್ಯಮಿ ದಯಾನಂದ ಪೈ ಹಾಗೂ ಸಚಿವ ಅಶ್ವತ್ಥನಾರಾಯಣ ಇಬ್ಬರೂ ಕುಟುಂಬ ಸಮೇತ ನಿಕಟವಾಗಿ ಆಪ್ತ ಮಾತುಕತೆಯಲ್ಲಿ ತೊಡಗಿರುವ ಫೋಟೋ ಒಂದನ್ನು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಜೆಡಿಎಸ್‌ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಎಂಎಸ್ ಟ್ರಸ್ಟ್ ಸರಕಾರದ ಸ್ವತ್ತು. ಅದು ಖಾಸಗಿಯವರ ಪಾಲಾಗಲು ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಜೆಡಿಎಸ್ ಸರಕಾರ ಬಂದರೆ ಆ ಟ್ರಸ್ಟ್ ಅನ್ನು ಸರಕಾರದ ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

BMS Trust: HD Kumaraswamy Releases Photo of Businessman Dayananda Pai and Minister Ashwatthanarayan in Talks
ಬಿಎಂಎಸ್ ಟ್ರಸ್ಟ್ ಅನ್ನು ಹೈಜಾಕ್ ಮಾಡುತ್ತಿರುವ ಉದ್ಯಮಿ ದಯಾನಂದ ಪೈ ಹಾಗೂ ಸಚಿವ ಅಶ್ವತ್ಥನಾರಾಯಣ ಇಬ್ಬರೂ ಕುಟುಂಬ ಸಮೇತ ನಿಕಟವಾಗಿ ಆಪ್ತ ಮಾತುಕತೆಯಲ್ಲಿ ತೊಡಗಿರುವ ಫೋಟೋ ಒಂದನ್ನು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ನಾನು ಸದನದಲ್ಲಿ ಅನೇಕ ಮಹತ್ವದ ಸಾಕ್ಷ್ಯಗಳನ್ನು ಮಂಡಿಸಿದ್ದೇನೆ. ಆದರೆ, ಸರಕಾರ ತನಿಖೆಗೆ ಒಪ್ಪಲಿಲ್ಲ. ಬಿಎಂಎಸ್ ಟ್ರಸ್ಟ್ ಅನ್ನು ಖಾಸಗಿ ಶಕ್ತಿಗಳ ಪಾಲಾಗುವಲ್ಲಿ ಸಚಿವ ಅಶ್ವತ್ಥನಾರಾಯಣ ಪಾತ್ರ ದೊಡ್ಡದು. ಅದಕ್ಕೆ ಈ ಫೋಟೋ ಕೂಡ ಒಂದು ಸಾಕ್ಷಿ ಎಂದು ಅವರು ತಿಳಿಸಿದರು.

ಸಚಿವ ಅಶ್ವತ್ಥನಾರಾಯಣ ಅವರೇನೋ ಹೇಳಿದ್ದಾರೆ. ಬಿಎಂಎಸ್ ಟ್ರಸ್ಟ್ ನದು ನಾನೇನೂ ತಿಂದಿಲ್ಲ ಎಂದು ಕಲಾಪದಲ್ಲಿ ಸುಳ್ಳು ಹೇಳಿದ್ದಾರೆ. ಆದರೆ, ಟ್ರಸ್ಟ್ ಲಪಟಾಯಿಸಲು ಹೊರಟಿರುವ ವ್ಯಕ್ತಿಯ ಜತೆ ಅವರು ಹೊಂದಿರುವ ಸಂಬಂಧ ಎಂತಹದು ಎನ್ನುವುದಕ್ಕೆ ನಾನು ಬಿಡುಗಡೆ ಮಾಡಿರುವ ಫೋಟೋ ಪ್ರಮುಖ ದಾಖಲೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

LEAVE A REPLY

Please enter your comment!
Please enter your name here