Home ಅಪರಾಧ ಬಿಎಂಟಿಸಿ ಕಚೇರಿಯಲ್ಲೇ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಿಎಂಟಿಸಿ ಕಚೇರಿಯಲ್ಲೇ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ

15
0

ಬೆಂಗಳೂರು: ಬಿಎಂಟಿಸಿ ನೌಕರನೊಬ್ಬ ಬೆಂಗಳೂರಿನ ಶಾಂತಿನಗರದ ಮುಖ್ಯ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಮಹೇಶ್‌ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ ಆರು ಗಂಟೆಗೇ ಕಚೇರಿಗೆ ಬಂದಿದ್ದ ಅವರು ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ರೆಕಾರ್ಡ್‌ ರೂಮ್‌ನ ಬೀಗ ಕೇಳಿ ಪಡೆದುಕೊಂಡು ಹೋಗಿದ್ದ ಮಹೇಶ್‌, ಕೆಲವೇ ಕ್ಷಣಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಮಹೇಶ್‌ ಇಲ್ಲಿಗೆ ವರ್ಗಾವಣೆಯಾಗಿ ಬಂದಿದ್ದರು ಎಂದು ತಿಳಿದುಬಂದಿದೆ. ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here