Home ಅಪರಾಧ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಆರೋಪ: 9 ಮಂದಿಯ ಬಂಧನ

ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಆರೋಪ: 9 ಮಂದಿಯ ಬಂಧನ

45
0
Representational Image
Advertisement
bengaluru

ಬೆಂಗಳೂರು:

ಮುಷ್ಕರದ ನಡುವೆಯೂ ಕರ್ತವ್ಯಕ್ಕೆ ಹಾಜರಾಗಿದ್ದ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ 9 ಮಂದಿ ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಪ್ರತಿಕ್ರಿಯಿಸಿ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 9 ಜನರನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದರು.

ಬಿಎಂಟಿಸಿ ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸುತ್ತಿದ್ದಾಗ ಈ ಮಧ್ಯೆಯೂ ಕೆಲ ನೌಕರರು, ಕರ್ತವ್ಯಕ್ಕೆ ಹಾಜರಾಗಲು ಶನಿವಾರ ಮೆಜೆಸ್ಟಿಕ್ ನಿಲ್ದಾಣಕ್ಕೆ ಬಂದಿದ್ದರು. ಅದೇ ವೇಳೆ ಗುಂಪೊಂದು, ನೌಕರರ ಮೇಲೆ ಹಲ್ಲೆ ನಡೆಸಿತ್ತು ಎಂದು ಅವರು ಹೇಳಿದರು.

bengaluru bengaluru

ನಿಲ್ದಾಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕರ್ತವ್ಯಕ್ಕೆ ಹಾಜರಾಗುವ ನೌಕರರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.


bengaluru

LEAVE A REPLY

Please enter your comment!
Please enter your name here