
Bomb threat calls to 15 Private Schools in Bengaluru: Police on high alert, It's Fake Bomb Threat says Bengaluru Police Commissioner B Dayananda
ಬೆಂಗಳೂರು:
ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.
ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಬೆದರಿಕೆ ಕರೆ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಯಿಂದ ಕಳುಹಿಸುತ್ತಿರುವ ಪೊಲೀಸರು, ಪೋಷಕರೆಲ್ಲರೂ ಆತಂಕಪಡುವ ಸ್ಥಿತಿ ಏನೂ ಆಗಿಲ್ಲವೆಂದು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರ ಹಾಗು ಬಾಂಬ್ ನಿಷ್ಕ್ರೀಯತಂಡ ದೌಡಾಯಿಸಿದ್ದು ಪರಿಶೀಲನೆ ನಡೆಸಲು ಮುಂದಾಗಿದೆ.
ಕಳೆದ 1 ವರ್ಷದಿಂದ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೂ ಸಹ ಈವರೆಗೂ ಬಾಂಬ್ ಬೆದರಿಕೆ ಹಾಕಿರುವ ಆರೋಪಿಯ ಬಂಧನವಾಗಿಲ್ಲ. ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇ-ಮೇಲ್ ಬೆದರಿಕೆ ಹಾಕಲಾಗಿತ್ತು.
ಇದು ನಕಲಿ ಬಾಂಬ್ ಬೆದರಿಕೆ: ಪೊಲೀಸ್ ಕಮಿಷನರ್
“ಇಂತಹ ಘಟನೆಗಳಿಂದ ಉಂಟಾಗಬಹುದಾದ ಆತಂಕಗಳು ಮತ್ತು ಆತಂಕಗಳನ್ನು ನಾವು ಅರ್ಥಮಾಡಿಕೊಂಡಿದ್ದೇವೆ, ಆದರೆ ಭಯಪಡುವ ಅಗತ್ಯವಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಒತ್ತಿ ಹೇಳಿದರು ಮತ್ತು ಸಾರ್ವಜನಿಕರು ಶಾಂತವಾಗಿರಲು ಒತ್ತಾಯಿಸಿದರು.
ಖಚಿತವಾಗಿರಿ, ನಮ್ಮ ಸಮುದಾಯದ ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ಪೊಲೀಸ್ ಇಲಾಖೆ ಬದ್ಧವಾಗಿದೆ. ಈ ನಕಲಿ ಬಾಂಬ್ ಕರೆಗಳ ಹಿಂದಿನ ಅಪರಾಧಿಗಳನ್ನು ಗುರುತಿಸಲು ನಾವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಮತ್ತು ಅವರನ್ನು ನ್ಯಾಯಾಂಗಕ್ಕೆ ತರಲು ತ್ವರಿತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.