Bomb threat calls to Private Schools in Bengaluru | ಪೋಷಕರು ಆತಂಕ ಪಡಬಾರದು, ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:
ರಾಜಧಾನಿ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಸೂಚಿಸಿದ್ದಾರೆ.
ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ,ಎಚ್ಚರಿಕೆ ಯಿಂದ ಇರಬೇಕು ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.
ನಗರದ ಶಾಲೆಗಳಿಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು.
ಎಲ್ಲಿಂದ ಸಂದೇಶ ಬಂದಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಎಲ್ಲಾ ಶಾಲೆಗಳಿಗೂ ಭದ್ರತೆ ಕೊಡಲು ಸೂಚನೆ ನೀಡಿದ್ದೇನೆ ಎಂದರು.
