ಬೆಂಗಳೂರು:
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಶಾಗ್ರೀಲಾಗೆ ಶುಕ್ರವಾರ ರಾತ್ರಿ ಬಾಂಬ್ ದಾಳಿ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು, ಹೋಟೆಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ ಹೊಟೆಲ್ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಿಮ್ಮ ಹೋಟೆಲ್‌ನಲ್ಲಿ ಬಾಂಬ್ ಇರಿಸಿ ಸ್ಫೋಟಿಸಲಾಗುವುದು. ಹೀಗೆ ಮಾಡಬಾರದೆಂದರೆ, 10 ಸಾವಿರ ಡಾಲರ್ (3 8.29 ಲಕ್ಷ) ಹಣ ನೀಡಿ ಎಂಬುದಾಗಿ ಆರೋಪಿಗಳು ಇಂಗ್ಲಿಷ್ ಮತ್ತು ಚೈನಿಸ್ ಭಾಷೆಗಳಲ್ಲಿ ಇಮೇಲ್ ಸಂದೇಶ ಕಳುಹಿಸಿದ್ದಾರೆ. luisamaclare@proton.me ಎಂಬ ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಹೈಗ್ರೌಂಡ್ಸ್ ಪೊಲೀಸರು ತನಿಖೆ ನಡೆಸಿದ್ದಾರೆ.
ಬೆಂಗಳೂರು ಮಾತ್ರವಲ್ಲದೇ ದೇಶದ ಹಲವೆಡೆ ಇರುವ ಶಾಂಗ್ರಿಲಾ ಹೋಟೆಲ್‌ಗಳ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದಿರುವುದಾಗಿ ದೂರುದಾರ ತಿಳಿಸಿದ್ದಾರೆ. ಸಾಮೂಹಿಕವಾಗಿ ಸಂದೇಶ ಕಳುಹಿಸಿ ಹೋಟೆಲ್‌ನವರಿಗೆ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗುತ್ತಿದೆ.