ಬೆಂಗಳೂರು;- ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರುತ್ತಾರೆ? ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಾವಧಿ ಸಿಎಂ ಎಂದು ಅನುಮಾನ ಬರುವ ರೀತಿಯಲ್ಲಿ ಅವರ ಸಂಪುಟದ ಹಿರಿಯ ಸಚಿವರೇ ಮಾತನಾಡಿದರು. ಇದೂವರೆಗೂ ಸಿದ್ದರಾಮಯ್ಯ ಸಹ 5 ವರ್ಷ ನಾನೇ ಸಿಎಂ ಅಂತ ಎಲ್ಲೂ ಹೇಳಿಲ್ಲ. ಏನಿದರರ್ಥ, ಏನು ಒಳಗಡೆ ನಡೆದಿದೆ ? ಇದು ರಾಜ್ಯದ ಜನತೆಗೆ ಗೊತ್ತಾಗಬೇಕು, ಇದು ಕಾಂಗ್ರೆಸ್ ಆಂತರಿಕ ವಿಷಯ ಅಲ್ಲ. ರಾಜ್ಯದ ಆಡಳಿತ ರಾಜ್ಯದ ಜನರಿಗೆ ಬೇಕಾದ ವಿಷಯ ಇದು ಎಂದು ಹೇಳಿದರು.
ಇನ್ನು ಮೂರು ಜನ ಉಪಮುಖ್ಯಮಂತ್ರಿಗಳ ವಿಚಾರದಲ್ಲಿ ಅವರ ಬುಡಕ್ಕೆ ಇವರು, ಇವರ ಬುಡಕ್ಕೆ ಅವರು ಇಡಲು ನೋಡುತ್ತಿದ್ದಾರೆ. ಈ ಮಧ್ಯೆ ಶಾಸಕರು ನಮ್ಮ ಮಾತು ಕೇಳುವವರಿಲ್ಲ, ಅಭಿವೃದ್ಧಿ ಇಲ್ಲ ಅಂತಿದ್ದಾರೆ. ಹೀಗಾಗಿ ಈ ಸರ್ಕಾರ ಗೊಂದಲದ ಗೂಡಾಗಿದೆ. ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಇನ್ನು ಸ್ವಲ್ಪ ದಿನದಲ್ಲಿ ಸ್ಪೋಟವಾಗಲಿದೆ ಎಂದು ಭವಿಷ್ಯ ನುಡಿದರು.
The post Bommai; ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ, ಇನ್ನು ಸ್ವಲ್ಪ ದಿನದಲ್ಲಿ ಸ್ಪೋಟ – ಬಸವರಾಜ ಬೊಮ್ಮಾಯಿ appeared first on Ain Live News.