ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಹಿನ್ನೆಲೆ ಗದಗ ನಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ ಮನೆ ಮಾಡಿದೆ.
ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. ಬೊಮ್ಮಾಯಿ, ಮೋದಿಯವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಹಾವೇರಿ ಗದಗ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ನನ್ನ ಗೆಲುವಿಗೆ ಕಾರಣರಾದ ಹಾವೇರಿ ಗದಗ ಜಿಲ್ಲೆಗಳ ಜನರಿಗೆ ಕೋಟಿ ಕೋಟಿ ನಮನಗಳು, ಮಹಾಜನತೆಯ ಆಶೀರ್ವಾದದಿಂದ ಈ ಗೆಲುವು ಸಾಧಿಸಿದ್ದೇನೆ ಎಂದು ಹೇಳಿದರು.
ಈಗಾಗಲೇ ಸಂದೇಶ ಬಂದಿದೆ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲಾಗುವುದು. ದೆಹಲಿಯಿಂದ ಬಂದ ಮೇಲೆ ದೊಡ್ಡ ಪ್ರಮಾಣದಲ್ಲಿ ಮೆರವಣಿಗೆ ಮಾಡೋಣ. ನೀವು ಇಟ್ಟಿರುವ ನಂಬಿಕೆಗೆ ತಕ್ಕಹಾಗೆ ಕೆಲಸ ಮಾಡುತ್ತೇನೆ. ಮಹಿಳೆಯರ ರಕ್ಷಣೆ .ಮಾಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇರಬಹುದು. ನಮ್ಮ ಬಳಿ ಜನ ಶಕ್ತಿ ಇದೆ. ಜನಶಸಕ್ಯಿ ರಾಜಶಕ್ತಿ ನಡುವೆ ಸಂಘರ್ಷ ಬಂದಾಗ ಜನಶಕ್ತಿ ಗೆಲ್ಲುತ್ತದೆ. ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸುಮ್ಮನೆ ಬಿಡುವುದಿಲ್ಲ ನಮ್ಮ ಕಾರ್ಯಕರ್ತರಿಗೆ ವಿನಾಕಾರಣ ತೊದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ನನ್ನ ಮೇಲೆ ನಂಬಿಕೆ ಇಟ್ಡು ಟಿಕೆಟ್ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗೆ ತುಂಬು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.