Home Uncategorized Breaking: ಅಕ್ರಮ ಆಸ್ತಿ ಗಳಿಕೆ ಕೇಸ್:‌ ಡಿ.ಕೆ. ಶಿವಕುಮಾರ್ ಮೇಲ್ಮನವಿ ವಿಚಾರಣೆ ಮುಂದೂಡಿಕೆ!

Breaking: ಅಕ್ರಮ ಆಸ್ತಿ ಗಳಿಕೆ ಕೇಸ್:‌ ಡಿ.ಕೆ. ಶಿವಕುಮಾರ್ ಮೇಲ್ಮನವಿ ವಿಚಾರಣೆ ಮುಂದೂಡಿಕೆ!

36
0

ಬೆಂಗಳೂರು:  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ಡಿ.ಕೆ.ಶಿವಕುಮಾರ್, ಸಿಬಿಐ ವಕೀಲರ ಮನವಿ ಮೇರೆಗೆ  ಮುಂದೂಡಲಾಗಿದೆ. ವಾದ ಮಂಡನೆಗಾಗಿ ವಿಚಾರಣೆಯನ್ನು ನ.29ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ. ಸಿಬಿಐ ತನಿಖೆಗೆ ಸರ್ಕಾರದ ಅನುಮತಿಯನ್ನು ಡಿಕೆ ಶಿವಕುಮಾರ್​ ಪ್ರಶ್ನಿಸಿದ್ದಾರೆ.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಅನುಮತಿಯನ್ನು ಹೈ ಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ದ್ವಿಸದಸ್ಯ ಪೀಠಕ್ಕೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಅದನ್ನು ಪರಿಗಣಿಸಿ, ಹೈ ಕೋರ್ಟ್​ ದ್ವಿಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಅದನ್ನು ಪ್ರಶ್ನಿಸಿ, ಸಿಬಿಐ ಸುಪ್ರಿಂಕೋರ್ಟ್​ ಮೆಟ್ಟಿಲೇರಿತ್ತು. ಈ ಪ್ರಕರಣವನ್ನು ಹೈ ಕೋರ್ಟ್​ ನಕ್ಕೇ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚಿಸಿದ ಸುಪ್ರಿಂಕೋರ್ಟ್​ 2 ವಾರಗಳ ಗಡುವು ನೀಡಿತ್ತು.

The post Breaking: ಅಕ್ರಮ ಆಸ್ತಿ ಗಳಿಕೆ ಕೇಸ್:‌ ಡಿ.ಕೆ. ಶಿವಕುಮಾರ್ ಮೇಲ್ಮನವಿ ವಿಚಾರಣೆ ಮುಂದೂಡಿಕೆ! appeared first on Ain Live News.

LEAVE A REPLY

Please enter your comment!
Please enter your name here