ದೆಹಲಿಯಲ್ಲಿ ತನ್ನ ಲಿವಿಂಗ್ ಟುಗೆದರ್ ಸಂಗಾತಿ ಶ್ರದ್ದಾ ವಾಕರ್ನ್ನು(Shraddha Walker) ಕೊಂದು ಮೃತದೇಹವನ್ನು ತುಂಡು ಮಾಡಿ ಫ್ರಿಡ್ಜ್ನಲ್ಲಿರಿಸಿ ನಂತರ ಅದನ್ನು ಅರಣ್ಯದಲ್ಲಿ ಬಿಸಾಡಿದ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು (Aaftab Poonawala) ಕರೆದೊಯ್ಯುತ್ತಿದ್ದ ವ್ಯಾನ್ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ. ಅಫ್ತಾಬ್ ಅಮೀನ್ ಪೂನಾವಾಲಾ ಶ್ರದ್ಧಾ ವಾಕರ್ ಮೃತದೇಹವನ್ನು ಕತ್ತರಿಸಲು ಬಳಸಿದ ಆಯುಧವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೂನಾವಾಲಾ ಇನ್ನೊಬ್ಬ ಮಹಿಳೆಗೆ ನೀಡಿದ್ದ ಎನ್ನಲಾದ ಶ್ರದ್ಧಾಳ ಉಂಗುರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಪೋಲಿಗ್ರಾಫ್ ಪರೀಕ್ಷೆಯ ನಂತರ ಪೊಲೀಸ್ ವ್ಯಾನ್ ಪೂನಾವಾಲಾನನ್ನು ಪಶ್ಚಿಮ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಜೈಲಿಗೆ ಕರೆದೊಯ್ಯುತ್ತಿತ್ತು ಎಂದು ಮೂಲಗಳು ತಿಳಿಸಿವೆ.ಎಫ್ಎಸ್ಎಲ್ ಕಟ್ಟಡದ ಹೊರಭಾಗದಲ್ಲಿ ಈ ದಾಳಿ ನಡೆದಿದೆ. ಕತ್ತಿ ಹಿಡಿದ 15 ಜನರು ವ್ಯಾನ್ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ದಾಳಿಕೋರರಲ್ಲಿ ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Police van carrying Shradhha murder accused Aftab Poonawalla attacked by at least 2 men carrying swords who claim to be from Hindu Sena, outside FSL office in Delhi pic.twitter.com/Bpx4WCvqXs
— ANI (@ANI) November 28, 2022
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
