ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಬಗ್ಗೆ ಕಾನೂನು ಸಚಿವ ಕಿರಣ್ ರಿಜಿಜು ಹೇಳಿಕೆಗೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಇತ್ತೀಚೆಗೆ ಮಾಡಿದ ಹೇಳಿಕೆಗೆ ಸುಪ್ರೀಂಕೋರ್ಟ್ ಇಂದು ಆಕ್ಷೇಪ ವ್ಯಕ್ತಪಡಿಸಿದ್ದು, ಅದು ನಡೆಯಬಾರದಿತ್ತು ಎಂದು ಹೇಳಿದೆ. “ಉನ್ನತ ಸ್ಥಾನದಲ್ಲಿರುವ ಯಾರಾದರೂ ಹಾಗೆ ಹೇಳಿದಾಗ ಅದು ಆಗಬಾರದಿತ್ತು” ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಎಸ್ ಓಕಾ ಅವರ ಪೀಠ ಹೇಳಿದೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
