ಬೆಂಗಳೂರು;- ಅನುದಾನ ವಾಪಾಸ್ ಪಡೆದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಮೌನ ಪ್ರತಿಭಟನೆ ನಡೆಸುತ್ತಿದ್ದ ಶಾಸಕ ಮುನಿರತ್ನ ಅವರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬೆಂಬಲ ವ್ಯಕ್ತಪಡಿಸಿದರು.
ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಸರ್ಕಾರ ನೀಡಿದ ಅನುದಾನ ರದ್ದು ಮಾಡಿ ಸೇಡಿನ ರಾಜಕಾರಣ ಮಾಡಿದ್ದಾರೆ. ಈ ರೀತಿ ಮಾಡೋದು ಸರಿಯಲ್ಲ. ಈ ರೀತಿ ಮಾಡಬಾರದು ಎಂದು ಸರ್ಕಾರದ ಜೊತೆ ನಾನು ಮಾತನಾಡ್ತೇನೆ. ಒಬ್ಬರೆ ಧರಣಿ ಮಾಡೋದು ಬೇಡ. ಮುನಿರತ್ನ ಜೊತೆ ನಾವೆಲ್ಲರೂ ಇದ್ದೇವೆ. ಧರಣಿ ಕೈಬಿಡಿ ಎಂದು ಮನವಿ ಮಾಡಿದ್ದೇನೆ. ಮೇಲ್ನೋಟಕ್ಕೆ ಇದು ದ್ವೇಷದ ರಾಜಕಾರಣ ಎಂದು ಅನಿಸುತ್ತಿದೆ ಎಂದರು.
The post BS Yeddyurappa; ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ, ಇದು ಸರಿಯಲ್ಲ – ಬಿ.ಎಸ್ ಯಡಿಯೂರಪ್ಪ appeared first on Ain Live News.
