Home ಕರ್ನಾಟಕ ನಾಳೆಯಿಂದ ಬಜೆಟ್ ಅಧಿವೇಶನ; ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ

ನಾಳೆಯಿಂದ ಬಜೆಟ್ ಅಧಿವೇಶನ; ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ

61
0

ಬೆಂಗಳೂರು:

ವಿಧಾನಮಂಡಲದ ಬಜೆಟ್ ಅಧಿವೇಶನ ಜನವರಿ 28ರಿಂದ ವಿಧಾನಸೌಧದಲ್ಲಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದ ದಿನಗಳಂದು ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ನಾಳೆಯಿಂದ ಫೆಬ್ರವರಿ 5ರವರೆಗೆ ಅಧಿವೇಶನ ನಡೆಯಲಿದ್ದು, ಈ ದಿನಗಳಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವೇಳೆ ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ.

ಮೆರವಣಿಗೆ, ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಶಸ್ತ್ರಾಸ್ತ್ರ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದು, ಯಾವುದೇ ಸ್ಫೋಟಕ ಸಿಡಿಸುವುದು, ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಪ್ರದರ್ಶನ, ವ್ಯಕ್ತಿಗಳು ಅಥವಾ ಅವರ ಶವಗಳ ಪ್ರತಿಕೃತಿ ಪ್ರದರ್ಶನ, ಪ್ರಚೋದನಾಕಾರಿ ಬಹಿರಂಗ ಘೋಷಣೆ, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರ, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರ ಯಾವುದೇ ವಸ್ತುಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಕಮಲ್ ಪಂತ್ ತಿಳಿಸಿದ್ದಾರೆ. UNI

LEAVE A REPLY

Please enter your comment!
Please enter your name here