Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • 𝗕𝗪𝗦𝗦𝗕ಗೆ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಅಂತಾರಾಷ್ಟ್ರೀಯ ಪ್ರಮಾಣಪತ್ರ; ದೇಶದ ಮೊದಲ ಜಲಮಂಡಳಿ ಎಂಬ ಗೌರವ
  • ಬೆಂಗಳೂರು ನಗರ

𝗕𝗪𝗦𝗦𝗕ಗೆ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಅಂತಾರಾಷ್ಟ್ರೀಯ ಪ್ರಮಾಣಪತ್ರ; ದೇಶದ ಮೊದಲ ಜಲಮಂಡಳಿ ಎಂಬ ಗೌರವ

ಬೆಂಗಳೂರು: ಬೆಂಗಳೂರು ಜಲಮಂಡಳಿ (Bangalore Water Supply and Sewerage Board – BWSSB) ಮಹತ್ವದ ಮೈಲಿಗಲ್ಲನ್ನು ಸಾಧಿಸಿ, 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಇಂಧನ ನಿರ್ವಹಣಾ ವ್ಯವಸ್ಥೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಪ್ರಮಾಣಪತ್ರವನ್ನು ಪಡೆದ ದೇಶದ ಮೊದಲ ಜಲಮಂಡಳಿಯಾಗಿ ಹೊರಹೊಮ್ಮಿದೆ. ಈ ಪ್ರತಿಷ್ಠಿತ ಪ್ರಮಾಣಪತ್ರವನ್ನು...
The Bengaluru Live April 17, 2026 1:37 PM 1 minute read
𝗕𝗪𝗦𝗦𝗕ಗೆ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಅಂತಾರಾಷ್ಟ್ರೀಯ ಪ್ರಮಾಣಪತ್ರ; ದೇಶದ ಮೊದಲ ಜಲಮಂಡಳಿ ಎಂಬ ಗೌರವ

𝗕𝗪𝗦𝗦𝗕ಗೆ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಅಂತಾರಾಷ್ಟ್ರೀಯ ಪ್ರಮಾಣಪತ್ರ; ದೇಶದ ಮೊದಲ ಜಲಮಂಡಳಿ ಎಂಬ ಗೌರವ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಬೆಂಗಳೂರು ಜಲಮಂಡಳಿ (Bangalore Water Supply and Sewerage Board – BWSSB) ಮಹತ್ವದ ಮೈಲಿಗಲ್ಲನ್ನು ಸಾಧಿಸಿ, 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಇಂಧನ ನಿರ್ವಹಣಾ ವ್ಯವಸ್ಥೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಪ್ರಮಾಣಪತ್ರವನ್ನು ಪಡೆದ ದೇಶದ ಮೊದಲ ಜಲಮಂಡಳಿಯಾಗಿ ಹೊರಹೊಮ್ಮಿದೆ.

ಈ ಪ್ರತಿಷ್ಠಿತ ಪ್ರಮಾಣಪತ್ರವನ್ನು 2026ರ ಏಪ್ರಿಲ್ 14ರಂದು ಬ್ಯೂರೋ ವೆರಿಟಾಸ್ (Bureau Veritas) ಸಂಸ್ಥೆ ನೀಡಿದ್ದು, BWSSB ಜಾರಿಗೆ ತಂದಿರುವ ಸಮರ್ಥ ಮತ್ತು ಅಂತರರಾಷ್ಟ್ರೀಯ ಮಟ್ಟದ ಇಂಧನ ನಿರ್ವಹಣಾ ವ್ಯವಸ್ಥೆಗಳಿಗೆ ಮಾನ್ಯತೆ ನೀಡಲಾಗಿದೆ. ವಿಶೇಷವಾಗಿ ಟಿ.ಕೆ.ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿ ಪ್ರದೇಶಗಳಲ್ಲಿರುವ ಬೃಹತ್ ನೀರು ಸರಬರಾಜು ಪಂಪಿಂಗ್ ಸ್ಟೇಷನ್‌ಗಳ ನಿರ್ವಹಣೆಯಲ್ಲಿ ತೋರಿದ ಕಾರ್ಯಕ್ಷಮತೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಈ ಪ್ರಮಾಣಪತ್ರವು ಕಾವೇರಿ ಭವನದಲ್ಲಿರುವ ಪ್ರಧಾನ ಕಚೇರಿಯ ಪೂರಕ ಕಾರ್ಯಗಳು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿರಂತರ ನೀರು ಸರಬರಾಜು ಮಾಡುವ ಒಟ್ಟು ಪ್ರಕ್ರಿಯೆಯನ್ನು ಸಹ ಒಳಗೊಂಡಿದೆ.

ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬೆಂಗಳೂರು ನಗರದ ಜಲ ಮೂಲಸೌಕರ್ಯವನ್ನು ಬಲಪಡಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಗಳು ಇಡಲಾಗಿದೆ. ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪ್ರಮಾಣಪತ್ರವನ್ನು ಹಸ್ತಾಂತರಿಸಿ ಧನ್ಯವಾದಗಳನ್ನು ಸಲ್ಲಿಸಿದರು.

ಈ ಸಾಧನೆಯನ್ನು ಶ್ಲಾಘಿಸಿದ ಡಿ.ಕೆ. ಶಿವಕುಮಾರ್ ಅವರು, “𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಪ್ರಮಾಣಪತ್ರವು ಬೆಂಗಳೂರು ನಗರಕ್ಕೆ ವಿಶ್ವದರ್ಜೆಯ, ಸುಸ್ಥಿರ ಜಲ ಮೂಲಸೌಕರ್ಯ ನಿರ್ಮಿಸುವಲ್ಲಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಬೃಹತ್ ಪಂಪಿಂಗ್ ಸ್ಟೇಷನ್‌ಗಳ ಸಮರ್ಥ ನಿರ್ವಹಣೆಯಿಂದ ಲಕ್ಷಾಂತರ ನಾಗರಿಕರಿಗೆ ನಿರಂತರ ಮತ್ತು ವಿಶ್ವಾಸಾರ್ಹ ನೀರು ಪೂರೈಕೆ ಸಾಧ್ಯವಾಗುತ್ತಿದೆ. ಇದು ‘ಬ್ರ್ಯಾಂಡ್ ಬೆಂಗಳೂರು’ ಅನ್ನು ಭವಿಷ್ಯೋನ್ಮುಖ, ಹವಾಮಾನ-ಸ್ಥಿತಿಸ್ಥಾಪಕ ನಗರವನ್ನಾಗಿ ರೂಪಿಸುವ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆ,” ಎಂದು ಹೇಳಿದರು.

ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು, ಈ ಸಾಧನೆ BWSSB ಸಿಬ್ಬಂದಿಯ ಪರಿಶ್ರಮ ಮತ್ತು ಸಮರ್ಪಣೆಯ ಫಲ ಎಂದು ಹೇಳಿದರು.

ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು, “ಪ್ರತಿ ಮನೆಗೂ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಒದಗಿಸುವುದು ನಮ್ಮ ಆದ್ಯತೆಯಾಗಿದ್ದು, ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಳವಡಿಸಿಕೊಂಡು ತಂತ್ರಜ್ಞಾನವನ್ನು ನಿರಂತರವಾಗಿ ಮೇಲ್ದರ್ಜೆಗೇರಿಸುತ್ತಿದ್ದೇವೆ,” ಎಂದು ತಿಳಿಸಿದರು.

ಇದಕ್ಕೂ ಮೊದಲು BWSSB ಕೊಳವೆ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಭಾರತೀಯ ಮಾನದಂಡಗಳ ಬ್ಯೂರೋ (BIS) ಪ್ರಮಾಣಪತ್ರವನ್ನು ಪಡೆದ ದೇಶದ ಮೊದಲ ಜಲಮಂಡಳಿಯಾಗಿತ್ತು. ಇದೀಗ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಅಂತಾರಾಷ್ಟ್ರೀಯ ಮಾನ್ಯತೆಯೊಂದಿಗೆ, ಸಂಸ್ಥೆಯ ವೇಗವಾದ ಅಭಿವೃದ್ಧಿ ಮತ್ತು ನಾಗರಿಕರಿಗೆ ನೀಡಲಾಗುತ್ತಿರುವ ಉನ್ನತ ಮಟ್ಟದ ಸೇವೆಯನ್ನು ಮತ್ತೊಮ್ಮೆ ದೃಢಪಡಿಸಿದೆ.

About the Author

The Bengaluru Live

Administrator

View All Posts

Post navigation

Previous: ಮುನಾವರ್ ಫಾರುಖಿ ಶೋ ರದ್ದುಪಡಿಸಲು ಹಿಂದೂ ಜನಜಾಗೃತಿ ಸಮಿತಿ ಮನವಿ
Next: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್‌ಗಳ ಕಾಳಾಬಜಾರ್: 49 ವರ್ಷದ ವ್ಯಕ್ತಿ ಬಂಧನ

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

The Bengaluru Live November 23, 2026 5:28 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.