ಜಲಮಂಡಳಿಯ ನೀರು ಸರಬರಾಜು, ಒಳಚರಂಡಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಅಧ್ಯಕ್ಷೆ ಡಾ. ಎನ್. ಮಂಜುಳಾ
ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷೆ ಡಾ. ಎನ್. ಮಂಜುಳಾ ಅವರು ಜಲಮಂಡಳಿಯ ಪ್ರಮುಖ ಯೋಜನೆಗಳು ಹಾಗೂ ಆಡಳಿತಾತ್ಮಕ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದರು.
ಸಭೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು, ಹೊಸ ನೀರಿನ ಮೀಟರ್ ಅಳವಡಿಕೆ, ಒಳಚರಂಡಿ ಶುದ್ಧೀಕರಣ ಘಟಕಗಳ (ಎಸ್ಟಿಪಿ) ನಿರ್ವಹಣೆ ಹಾಗೂ ಆಡಳಿತಾತ್ಮಕ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಎಲ್ಲ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಅಂತರ್ಜಲ ಮಟ್ಟ ಹಾಗೂ ಕೊಳವೆಬಾವಿಗಳ ಪ್ರಸ್ತುತ ಸ್ಥಿತಿಗತಿಗಳ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಿಂದ ಸಮಗ್ರ ಅಧ್ಯಯನ ನಡೆಸಿಸಿ, ವೈಜ್ಞಾನಿಕ ಆಧಾರಿತ ನೀರಿನ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಲಮಂಡಳಿಯ ಆಡಳಿತಾಧಿಕಾರಿ ಮದನ್ ಮೋಹನ್, ಪ್ರಧಾನ ಮುಖ್ಯ ಅಭಿಯಂತರ ದಲಾಯತ್, ಆರ್ಥಿಕ ಸಲಹೆಗಾರ ಸುಬ್ಬರಾಮಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.