ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ
ಸೆಪ್ಟೆಂಬರ್ 12ರಂದು ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನಡೆಯಬೇಕಿದ್ದ ನೇರ ಫೋನ್-ಇನ್ ಕಾರ್ಯಕ್ರಮ ವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ
ಅಧ್ಯಕ್ಷರೊಂದಿಗಿನ ಮುಂದಿನ ನೇರ ಫೋನ್ ಇನ್ ಕಾರ್ಯಕ್ರಮದ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ಬೆಂಗಳೂರು ಜಲಮಂಡಳಿಯ ಸಹಾಯವಾಣಿ ಸಂಖ್ಯೆ 1916ಗೆ ಕರೆ ಮಾಡಿಯೂ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.
