ಬೆಂಗಳೂರು/ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಇಂದು ಶಿಕಾರಿಪುರದ ತಾಲ್ಲೂಕು ಆಡಳಿತ ಕಛೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.
ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ನಡೆಯುತ್ತಿರುವ ಹರ್ ಘರ್ ತಿರಂಗಾ ಅಭಿಯಾನವನ್ನು ಪ್ರತಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಎಲ್ಲೆಡೆ ಅಭಿಯಾನ ಯಶಸ್ವಿಯಾಗಿದ್ದು ಮಾನ್ಯ ಪ್ರಧಾನಿಗಳ ವಿಕಸಿತ ಭಾರತದ ಸಂಕಲ್ಪಕ್ಕೆ ಜೊತೆಯಾಗಬೇಕೆಂಬ ಸಂಕಲ್ಪ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.