ಬೆಂಗಳೂರು:
ಪಕ್ಷವನ್ನು ಕೇಡರ್ ಬೇಸ್ ಪಕ್ಷವಾಗಿ ಮಾಡಲು ಎಲ್ಲಾ ನಾಯಕರು ಒಮ್ಮತದ ನಿರ್ಧಾರ ಕೈಗೊಂಡಿದ್ದೇವೆ.ಗ್ರಾಮ ಪಂಚಾ ಯಿತಿ ಚುನಾವಣೆ ಹಿನ್ನಲೆಯಲ್ಲಿ ಪಂಚಾಯ್ತಿ ಹಾಗೂ ಬೂತ್ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು.ಅದಕ್ಕೆ “ಪ್ರಜಾ ಪ್ರತಿನಿಧಿ” ಅಂತಾ ಹೆಸರು.ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಇದನ್ನು ಅನುಷ್ಠಾನಕ್ಕೆ ತರಲು ತಯಾರಿ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಖಾಸಗಿ ಹೋಟೇಲಿನಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು,ಇಂದು ಸುಮಾರು 50 ಜನ ಹಿರಿಯ ನಾಯ ಕರ ಜತೆ ರಾಜ್ಯದ ಪ್ರಚಲಿತ ವಿದ್ಯ ಮಾನಗಳು,ಪಕ್ಷದ ಆಗು-ಹೋಗುಗಳ ಬಗ್ಗೆ ಚರ್ಚೆ ಮಾಡಿದ್ದೇವೆ.ಇನ್ನೂ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿ ದ್ದು,ಇನ್ನಷ್ಟೇ ತೀರ್ಮಾನಕ್ಕೆ ಬರಬೇಕಿದೆ.ಗ್ರಾಮ ಪಂಚಾಯ್ತಿ ಚುನಾವಣೆ ದಿನಾಂಕ ಘೋಷಣೆ ಮಾಡಿರುವ ಚುನಾವಣಾ ಆಯೋಗ ನಿರ್ಧಾರವನ್ನು ಸ್ವಾಗ ತಿಸುತ್ತೇವೆ.ಹಾಗೂ ಅಗತ್ಯ ತಯಾರಿ ನಡೆಸಿಕೊಳ್ಳಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಅವರು ಹೇಳಿದರು.
ಇಂದಿನ ಸಭೆಯಲ್ಲಿ ನಮ್ಮನ್ನು ಅಗಲಿದ ಹಿರಿಯ ನಾಯಕರಾದ ಅಹ್ಮದ್ ಪಟೇಲ್ ಹಾಗೂ ತರು ಣ್ ಗೊಗೋಯ್ ಅವರಿಗೆ ಸಂತಾಪ ಸೂಚನೆ ಮಾಡ ಲಾಗಿದೆ.ಜೊತೆಗೆ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಮಾಡಿದ್ದೇವೆ.ಮುಂದಿನ ಚುನಾವಣೆಗಳಲ್ಲಿ ಎಚ್ಚೆ ತ್ತುಕೊಂಡು ಸ್ಥಳೀಯ ನಾಯಕರಿಗೆ ಆದ್ಯತೆ ನೀಡಲಿದ್ದೇವೆ.ಇದಕ್ಕಾಗಿ ಸಮಿತಿ ರಚಿಸಿದ್ದು,ಅವರ ಸಲಹೆ ಮೇರೆಗೆ ಅಭ್ಯರ್ಥಿ ಆಯ್ಕೆ ಮಾಡಿ ಹೈಕಮಾಂಡ್ ಗೆ ಹೆಸರು ಶಿಫಾರಸ್ಸು ಮಾಡುತ್ತೇವೆ.ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ನಾಯಕರು ಸೇರಿದಂತೆ 9 ತಂಡಗಳನ್ನು ರಚನೆ ಮಾಡುತ್ತಿದ್ದು,ಅವರು ಜಿಲ್ಲಾ ಹಾಗೂ ವಿಧಾನ ಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರವಾಸ ಮಾಡಲಿದ್ದಾರೆ.ಅದರ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಸರ್ಕಾರದ ತಪ್ಪುಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಸಿ,ಜನರ ಕೈಗೇ ಅಧಿಕಾರ ನೀಡಲು ನಮ್ಮದೇ ಆದ ಪ್ರಯತ್ನ ಮಾಡುತ್ತೇವೆ.ಪಕ್ಷದ ಸಂಘಟನೆಗಾಗಿ ಸಾಂಸ್ಕೃತಿಕ,ಚಾಲಕರ ಹಾಗೂ ಸಹಕಾರ ಸಂಘ ಘಟಕಗಳನ್ನು ರಚನೆ ಮಾಡಲಿದ್ದು,ಪಂಚಾಯ್ತಿ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ಈ ಘಟಕಗಳು ಆರಂಭವಾಗಲಿವೆ ಎಂದು ಅವರು ವಿವರಿಸಿದರು.
ದೆಹಲಿಯಲ್ಲಿ ನಡೆಯುತ್ತಿರುವ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತರ ಜನಪರ ಹೋರಾಟದ ಪರವಾಗಿ ಕಾಂಗ್ರೆಸ್ ನಿಲ್ಲುತ್ತದೆ.ರೈತರನ್ನು ಉಳಿಸ ಲು ನಮ್ಮ ಹೋರಾಟ ಮಾಡು ತ್ತೇವೆ.ಕೂಡಲೇ ಕೇಂದ್ರ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿ,ಎಲ್ಲ ರೈತಮಾರಕ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂ ದು ಆಗ್ರಹ ಮಾಡುತ್ತೇವೆ.
ಬಿಜೆಪಿ ಮತ್ತು ಆರ್ ಎಸ್ಎಸ್ ಹಿಂದುತ್ವವನ್ನು ತಮ್ಮಚುನಾವಣಾ ಅಜೆಂಡಾವನ್ನಾಗಿ ಮುಂದಿ ಟ್ಟುಕೊಂಡು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ.ಹಿಂದುತ್ವ ಯಾರ ಆಸ್ತಿಯೂ ಅಲ್ಲ.ಭಾರತದ ಪರಂಪರೆ,ಸಂಸ್ಕೃತಿ ನಮ್ಮ ಆಸ್ತಿ.ಮಹಾತ್ಮ ಗಾಂಧೀಜಿ,ವಿವೇಕಾನಂದರ ಹಿಂದುತ್ವ ವಾದದ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದು,ಈ ಬಗ್ಗೆ ಮುಂದೆ ಮಾತನಾಡುತ್ತೇನೆ.ಸಂವಿಧಾನ ಉಳಿಸೋದು ನಮ್ಮ ಗುರಿ ಎಂದು ಹೇಳಿದರು.
ಮಾಜಿ ಮುಖ್ಯಮಮತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಡಿ.ಕೆ.ಶಿವಕುಮಾರ್ ಅವರು,ಕುಮಾರಸ್ವಾಮಿ ದೊಡ್ಡವರು,ಅವರು ಏನು ಬೇಕಾದರೂ ಹೇಳಲಿ.ಅವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
Held a KPCC Senior Party leaders meeting today in the presence of AICC Representative @AdvYashomatiINC and held a fruitful strategy discussion with them regarding various organisational and political matters. pic.twitter.com/utQ9vAbA3E
— DK Shivakumar (@DKShivakumar) November 30, 2020
ಸಿದ್ದು ಸವದಿ ಅವರ ಕ್ಷೇತ್ರದಲ್ಲಿ ಹೆಣ್ಣು ಮಗಳೊಬ್ಬಳ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಾಗಲಿ,ಪೊಲೀಸ್ ಇಲಾಖೆ ಯಾಗಲಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.ನಾವು ಅಲ್ಲಿಗೇ ಭೇಟಿ ಕೊಟ್ಟು ಆ ಹೆಣ್ಣಿನ ಪರವಾಗಿ ನಿಲ್ಲುತ್ತೇವೆ. ಮಹಿಳೆ ಮೇಲೆ ದೌರ್ಜನ್ಯ ನಡೆಸಿ ದವರನ್ನು ತಕ್ಷಣ ಬಂಧಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು
ಎಚ್.ವಿಶ್ವನಾಥ್ ಅವರು ಸಚಿವರಾಗಬಾರದು ಎಂಬುದು ನ್ಯಾಯಾಲಯದ ತೀರ್ಪು ನೀಡಿದೆ.ನ್ಯಾಯಾಲಯದ ತೀರ್ಪು ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದು ಹೇಳುವ ಮೂಲಕ ನುಣುಚಿಕೊಂಡರು.