Home ರಾಜಕೀಯ ವಿಜಯನಗರ ನೂತನ ಜಿಲ್ಲೆ ರಚನೆಗೆ ಸಂಪುಟ ತಾತ್ವಿಕ ಒಪ್ಪಿಗೆ

ವಿಜಯನಗರ ನೂತನ ಜಿಲ್ಲೆ ರಚನೆಗೆ ಸಂಪುಟ ತಾತ್ವಿಕ ಒಪ್ಪಿಗೆ

70
0
Advertisement
bengaluru

ಡಿಸೆಂಬರ್ 7ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ

ಬೆಂಗಳೂರು:

ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರೂಪಿಸಲು ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದ್ದು ಮುಂದಿನ ಸಂಪುಟದಲ್ಲಿ ಪೂರ್ಣ ಪ್ರಮಾಣದ ಅನುಮೋದನೆ ದೊರೆಯ ಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ವಿಧಾನ ಸೌಧದಲ್ಲಿಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿಜಯನಗ ರ ಜಿಲ್ಲೆ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದ್ದು,ಮುಂದಿನ ಸಭೆಯಲ್ಲಿ ಅಧಿಕೃತ ಅನುಮೋದನೆ ಸಿಗಲಿದೆ.ಜಿಲ್ಲೆಯ ರಚನೆ ಸಂಬಂಧ ಪ್ರಕ್ರಿಯೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆ ಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದರು.

ಡಿಸೆಂಬರ್ 7 ರಿಂದ 15ರವರೆಗೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಬೆಂಗಳೂರಲ್ಲಿ ನಡೆಸಲು ತೀರ್ಮಾನಿಸಲಾಗಿದೆ.ಆರಂಭದಲ್ಲಿ ಬೆಳಗಾವಿಯಲ್ಲಿ ನಡೆಸುವ ಚಿಂತನೆಯಿತ್ತು ಆದರೆ ಆರ್ಥಿಕ ಹಾಗೂ ಇತರೆ ಸಮಸ್ಯೆಗಳ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಇದೇ ವೇಳೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಸ್ಪಷ್ಟೀಕರಣ ನೀಡಿದ ಅವರು ಮರಾಅಭಿವೃದ್ಧಿ ಪ್ರಾಧಿಕಾರವಲ್ಲ ಸಮುದಾಯ ಅಭಿವೃದ್ದಿ ನಿಗಮವಾಗಿದೆ.ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆಗೆ ನಿರ್ಧರಿಸಿ ದ್ದು,ಇನ್ನು ಮುಂದೆ ‘ ಮರಾಠ ಸಮುದಾಯ ನಿಗಮ ‘ ಎಂದು ಬದಲಾವಣೆ ಯಾಗಲಿದೆ.ಮರಾಠ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡ ಬೇಕು.ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು.ಹಣ ಎಷ್ಟು ನಿಗದಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ.ಒಂದು ಸಮುದಾಯದ ಅಭಿವೃದ್ಧಿ ವಿಷಯದಲ್ಲಿ ಯಾಕೆ ವಿರೋಧ ಮಾಡುತ್ತಿದ್ದಾ ರೋ ಗೊತ್ತಿಲ್ಲ.ಆದರೂ ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

bengaluru bengaluru

ಪ್ರವಾಹ ಪೀಡಿತ ಜಿಲ್ಲೆಗಳಿಗೆ 1000 ಕೋಟಿ ರೂ. ಬಿಡುಗಡೆ ಮಾಡಲು ಸಂಪುಟ ತೀರ್ಮಾನಿಸಿದೆ.ನೆರೆ ಹಾಗೂ ಅತಿವೃಷ್ಠಿ ಸಂತ್ರಸ್ಥರ ಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ.ಎಸ್‍ಸಿ- ಎಸ್‍ಟಿ ಮೀಸಲಾತಿ ಹೆಚ್ಚಳ ಸಂಬಂಧ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗುತ್ತದೆ.ಒಂದು ವಾರದಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ.ಸಮಿತಿ ವರದಿ ಆಧರಿಸಿ ಮೀಸಲು ಹೆಚ್ಚಳ ಮಾಡಲಾಗುತ್ತದೆ ಎಂದರು.ಸಮಿತಿಯ ಸದಸ್ಯ ರನ್ನು ಮುಖ್ಯಮಂತ್ರಿ ಅವರು ನೇಮಕ ಮಾಡಲಿದ್ದು ಒಂದೆರಡು ದಿನಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದರು.

ಕೃಷ್ಣಾ ಭಾಗ್ಯ ಜಲ ನಿಗಮ,ಕಾವೇರಿ ಅಭಿವೃದ್ಧಿ ನಿಗಮ ಮತ್ತು ವಿಶ್ವೇಶ್ವರಯ್ಯ ಅಭಿವೃದ್ಧಿ ನಿಗಮಕ್ಕೆ 1600 ಕೋ ಟಿ ರೂ ಸಾಲ ಪಡೆಯಲು ಅನುಮತಿ ನೀಡಲಾಗಿದೆ.ಹೊಸಪೇಟೆಯಲ್ಲಿ 13 ಕೋಟಿ ಅಂದಾಜು ವೆಚ್ಚದಲ್ಲಿ ಸುಸ ಜ್ಜಿತ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು19 ನಿರ್ಬಂಧಿತ ರಜೆ ನೀಡಲು ಅನುಮೋದನೆ ಸಿಕ್ಕಿದ್ದು, ಲೋಕಸೇವಾ ಆಯೋಗದ ಅನುಮತಿ ಇಲ್ಲದೆ ಸರ್ಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳಲು ನಿಯಮಾವಳಿ ತಿದ್ದುಪಡಿ ಮಾಡಲಾಗುತ್ತದೆ.

ಇದೇ ವೇಳೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು,ಪರಿಶಿಷ್ಟ ಪಂಗಡದ ಮೀಸಲು ಹೆಚ್ಚಳಕ್ಕೆ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆದಿತ್ತು.ಪರಿಶಿಷ್ಟ ಜಾತಿಗೆ ಶೇಕಡಾ 15ರಷ್ಡು ಹಾಗು ಪರಿಶಿಷ್ಟ ಪಂಗಡಕ್ಕೆ ಶೇಕಡಾ 7 ರಷ್ಟು ಮೀಸಲು ನಿಗದಿ ಪಡಿಸಲು ಒತ್ತಾಯವಿತ್ತು. ನಾಗಮೋಹನದಾಸ್ ಸಮಿತಿ ವರದಿಯನ್ವಯ ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ನಿರ್ಧರಿಸಲಾಗು ವುದು ಎಂದು ಅವರು ತಿಳಿಸಿದರು.

ವಿಜಯನಗರ ಜಿಲ್ಲೆ ರಚನೆ ಮಾಡಿದ್ದಕ್ಕೆ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಆನಂದ್ ಸಿಂಗ್,ವಿಜ ಯನಗರ ಜಿಲ್ಲೆಯಾಗಬೇಕು ಎಂಬುದು ಬಹುದಿನದ ಬೇಡಿಕೆ.ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರ ವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ತೀರ್ಮಾನದಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ. ಎಲ್ಲರನ್ನೂ ವಿಶ್ವಾಸಕ್ಜೆ ತೆಗೆದುಕೊಂಡಿದ್ದೇವೆ.ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ.ಹೋ ರಾಟಕ್ಕೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ.ಅಂತೆಯೇ ಬೇಡಿಕೆ ಈಡೇರಿಕೆಗೆ ಒಪ್ಪಿಗೆ ನೀಡಿದ ಮುಖ್ಯಮಂತ್ರಿಗಳಿಗೂ ಅಭಿನಂದನೆ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.ಇದೇ ವೇಳೆ ಸಚಿವ ಶ್ರೀರಾಮುಲು ಮಾತನಾಡಿ ಜಿಲ್ಲೆಯ ಹಲವಾರು ಮಠಾಧೀಶರು ಹಾಗೂ ಜನರ ಹೋರಾಟಕ್ಕೆ ಸರ್ಕಾರ ನೀಡಿರುವುದಕ್ಕೆ ಸಂತಷ ವಾಗಿದೆ. ಎಲ್ಲರೂ ಒಟ್ಟಾಗಿ ಜಿಲ್ಲೆಯಅಭಿವೃದ್ದಿಗೆ ಶ್ರಮಿಸೋಣವೆಂದು ಅವರು ಹೇಳಿದರು.


bengaluru

LEAVE A REPLY

Please enter your comment!
Please enter your name here