ಬೆಂಗಳೂರು: ನವೆಂಬರ್ 5ರ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಧರ್ಮಪುರ ಕೆರೆಯಿಂದ ಹಲಗಲದ್ದಿ, ಮದ್ದಿಹಳ್ಳಿ, ಖಂಡೇನಹಳ್ಳಿ, ಬೇತೂರು ಮತ್ತು ಇತರ ಕೆರೆಗಳನ್ನು ತುಂಬಿಸುವ ಏತ ನೀರಾವರಿ ಕಾಮಗಾರಿಯನ್ನು ₹35 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸಂಪುಟ ತೀರ್ಮಾನಗಳ ಟಿಪ್ಪಣಿ ತಿಳಿಸಿದೆ.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯ ಪರಿಗಣಿಸಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಟಿಪ್ಪಣಿ ಹೇಳಿದೆ. ಈ ಯೋಜನೆಯನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಪ್ರಸ್ತಾಪಿಸಿದೆ.
