Home ಬೆಂಗಳೂರು ನಗರ 1081 ಕೋಟಿ ರೂಪಾಯಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣಕ್ಕೆ ಸಂಪುಟ ಒಪ್ಪಿಗೆ

1081 ಕೋಟಿ ರೂಪಾಯಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣಕ್ಕೆ ಸಂಪುಟ ಒಪ್ಪಿಗೆ

28
0
Cabinet approves vrishabhavathi canal water purification at a cost of Rs 1081 crore. (Image Source Paani.Earth)
Cabinet approves vrishabhavathi canal water purification at a cost of Rs 1081 crore. (Image Source Paani.Earth)

ಬೆಂಗಳೂರು:

1081 ಕೋಟಿ ರೂ. ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣ ಸಂಬಂಧ ಸಣ್ಣ ನೀರಾವರಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 83 ಕೆರೆಗಳ ಭರ್ತಿ ಮಾಡುವುದು. 1081 ಕೋಟಿ ರೂಪಾಯಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಿಸಿ ಆ ನೀರನ್ನು ಕೆರೆಗಳಿಗೆ ಹರಿಸಲು ಸಂಪುಟ ಸಭೆ ಸಮ್ಮತಿಸಿದೆ.

ಕೋರಮಂಗಲ-ಚಲ್ಲಘಟ್ಟ ಕಣಿವೆಯಲ್ಲಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 126 ಕೆರೆಗಳನ್ನು ತುಂಬಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ವೃಷಭಾವತಿಯಲ್ಲಿ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಿ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಯ ಕೆರೆಗಳನ್ನು ಭರ್ತಿ ಮಾಡಲು ಯೋಜನೆ ರೂಪಿಸಲಾಗಿದೆ.

ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್​ಕೆ ಪಾಟೀಲ್​, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಪತ್ತು ನಿರ್ವಹಣೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದ್ದು, ಸಾರಿಗೆ ನಿಗಮಗಳ 79 ಕೋಟಿ ರೂ. ಮೋಟಾರ್​ ವೆಹಿಕಲ್ ಟ್ಯಾಕ್ಸ್​ ವಿನಾಯಿತಿ ನೀಡಲು ತಿರ್ಮಾನಿಸಲಾಗಿದೆ.

ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದುನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಎಪಿಎಂಸಿ ಕಾನೂನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಎಚ್ ಕೆ ಪಾಟೀಲ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here