ಬೆಂಗಳೂರು: ನವೆಂಬರ್ 5ರ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ಜಿಲ್ಲಾ ನ್ಯಾಯಾಲಯ ಕಟ್ಟಡ ಆವರಣದಲ್ಲಿ ಅನೆಕ್ಸ್ ಕೋರ್ಟ್ ಕಟ್ಟಡ, ಕುಟುಂಬ ನ್ಯಾಯಾಲಯ ಮತ್ತು ಹೆಚ್ಚುವರಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ₹12.40 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಅನುಮೋದನೆ ನೀಡಿದೆ ಎಂದು ಸಂಪುಟ ತೀರ್ಮಾನಗಳ ಟಿಪ್ಪಣಿ ತಿಳಿಸಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಸಂಕೀರ್ಣದ ಕಾಮಗಾರಿಯನ್ನು ₹35.04 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಸಹ ಸಂಪುಟ ಅನುಮೋದನೆ ನೀಡಿದೆ.
