ಬೆಂಗಳೂರು: ನವೆಂಬರ್ 5ರ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿರುವ ಕಾವೇರಿ ನೀರು ಸರಬರಾಜು ಯೋಜನೆ 4ನೇ ಹಂತ 2ನೇ ಘಟ್ಟದ 550 ಎಂ.ಎಲ್.ಡಿ. ಸಾಮರ್ಥ್ಯದ ಜಲರೇಚಕ ಯಂತ್ರಾಗಾರಗಳು ಹಾಗೂ ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿರುವ 220 ಕೆವಿ/66 ಕೆವಿ/11 ಕೆವಿ ಉಪಕೇಂದ್ರಗಳ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ₹84.47 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಿದೆ ಎಂದು ಸಂಪುಟ ತೀರ್ಮಾನಗಳ ಟಿಪ್ಪಣಿ ತಿಳಿಸಿದೆ.
