Car accident in Maharani College campus in Bengaluru
ಬೆಂಗಳೂರು:
ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಕ್ಲಸ್ಟರ್ ಕಾಲೇಜು ಆವರಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿನಿಯರು ಹಾಗೂ ಮ್ಯೂಸಿಕ್ ಟೀಚರ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿರುವುದು ಶನಿವಾರ ವರದಿಯಾಗಿದೆ.
ಕಾಲೇಜು ಆವರಣದಲ್ಲಿ ಅತಿ ವೇಗದಲ್ಲಿದ್ದ ಇಂಗ್ಲಿಷ್ ಪ್ರೊಫೆಸರ್ ಒಬ್ಬರ ಕಾರು ಇಬ್ಬರು ವಿದ್ಯಾರ್ಥಿನಿಯರು ಮತ್ತು ಮ್ಯೂಸಿಕ್ ಟೀಚರ್‌ಗೆ ಢಿಕ್ಕಿ ಹೊಡೆದೆ ಎಂದು ಹೇಳಲಾಗಿದೆ.

ಮಹಾರಾಣಿ ಕಾಲೇಜಿನ ಆವರಣದಲ್ಲಿ ಬೆಳಗ್ಗೆ 9.30ರ ಸುಮಾರಿಗೆ ನಡೆದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮ್ಯೂಸಿಕ್ ಟೀಚರ್ ಜ್ಯೋತಿ ಅವರಿಗೂ ಗಾಯಗಳಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರೊಫೆಸರ್ ನಾಗರಾಜ್ ಅವರು ಕಾಲೇಜಿಗೆ ಕಾರು ಚಲಾಯಿಸಿಕೊಂಡು ಬಂದಿದ್ದು, ಕಾರು ಒಳ ಆವರಣದಲ್ಲಿ ಬರುತ್ತಿದ್ದಂತೆ ಇಬ್ಬರು ವಿದ್ಯಾರ್ಥಿನಿಯರು ಕಾರಿಗೆ ಅಡ್ಡ ಬಂದಿದ್ದಾರೆ. ಈ ವೇಳೆ ಪ್ರೊಫೆಸರ್ ಅವರು ಕೊಂಚ ಗಾಬರಿಯಾಗಿದ್ದು, ಕಾರಿನ ಬ್ರೇಕ್ ಒತ್ತುವ ಬದಲಾಗಿ, ಆ್ಯಕ್ಸಿಲರೇಟರ್ ಒತ್ತಿದ್ದಾರೆ. ಪರಿಣಾಮ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
