Home ಬೆಂಗಳೂರು ನಗರ Bengaluru | ಬಿಎಂಟಿಸಿ ಬಸ್​ಗೆ ಢಿಕ್ಕಿಯಾಗಿ ಹೊತ್ತಿ ಉರಿದ ಕಾರು

Bengaluru | ಬಿಎಂಟಿಸಿ ಬಸ್​ಗೆ ಢಿಕ್ಕಿಯಾಗಿ ಹೊತ್ತಿ ಉರಿದ ಕಾರು

43
0
Car hit the BMTC bus and caught fire in Bengaluru

ಬೆಂಗಳೂರು:

ಬೆಂಗಳೂರಿನ ನಾಯಂಡಹಳ್ಳಿ ರಸ್ತೆಯಲ್ಲಿ ಬಿಎಂಟಿಸಿ ಸಾರಿಗೆ ಬಸ್‌ ಹಾಗೂ ಕಾರಿನ ಮದ್ಯೆ ಅಪಘಾತ ಸಂಭವಿಸಿದ್ದು, ಢಿಕ್ಕಿ ಹೊಡೆದಿದ್ದ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ, ಬಿಎಂಟಿಸಿ ಸಾರಿಗೆ ಬಸ್‌ನ ಹಿಂಭಾಗ ಬೆಂಕಿ ಹೊತ್ತಿಕೊಂಡು ಸೀಟುಗಳು ಸುಟ್ಟು ಕರಕಲಾಗಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿಗೆ ಸಣ್ಣ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ನಿಂತಿದ್ದ ಸಿಟಿ ಬಸ್ಗೆ ಹಿಂದಿನಿಂದ ಕಾರು ಗುದ್ದಿದ್ದು ಬೆಂಕಿ ಆವರಿಸಿತ್ತು.ಆದ್ರೆ ಬಸ್ ಡ್ರೈವರ್ ಜಾಣ್ಮೆಯಿಂದ 40 ಕ್ಕೂಹೆಚ್ಚು ಪ್ರಯಾಣಿಕರು ಪಾರಾಗಿದ್ದಾರೆ.

Car hit the BMTC bus and caught fire in Bengaluru

ಕಾರು ಹೊತ್ತಿ ಉರಿದ ಘಟನೆ ನಾಯಂಡಹಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ನಿಂತಿದ್ದ ಬಿಎಂಟಿಸಿ ಬಸ್ಗೆ ವೇಗವಾಗಿ ಬಂದ ಐ20 ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ನಡುರಸ್ತೆಯಲ್ಲೇ ಬೆಂಕಿ ,ಕಾರು ಸುಟ್ಟು ಕರಕಲಾಗಿದೆ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾರು ಬಸ್ಗೆ ಡಿಕ್ಕಿ ಹೊಡೆದು ಬೆಂಕಿ ತಗುಲಿದ್ದು ಕಾರು ಸಂಪೂರ್ಣ ಸುಟ್ಟು ಹೋಗಿದೆ. ಬಸ್ನ ಹಿಂದಿನ ಭಾಗ ಸ್ವಲ್ಪ ಬೆಂಕಿಗಾಹುತಿಯಾಗಿದೆ.

ವೇಗವಾಗಿ ಕಾರ್ ಬಂದು ಡಿಕ್ಕಿ ಹೊಡೆದ ಹಿನ್ನೆಲೆ ಕಾರು ಚಾಲಕನಿಗೆ ಮೂಗಿನ ಬಳಿ ಕೊಂಚ ಗಾಯಗಳಾಗಿವೆ. ಉಳಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಶವಂತಪುರ ಟು ಬನಶಂಕರಿ ಮಾರ್ಗದಲ್ಲಿ ಸಂಚರಿಸುವ ಬನಶಂಕರಿ ಡಿಪೋನ 26ರ ಮಾರ್ಗದ 401NY ಬಸ್ ಸಂಖ್ಯೆ F4968ರ ಬಸ್ ಇದಾಗಿದ್ದು ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಚಾಲಕ ಗೌರೀಶ್ ಬಿ, ನಿರ್ವಾಹಕ ಗಿರಿಧರ್ ಇಬ್ಬರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಚಂದ್ರಲೇಔಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಲು ನಿಲ್ಲಿಸಿದ್ದ ವೇಳೆ ಕಾರು ವೇಗವಾಗಿ ಬಂದು ಬಸ್ಗೆ ಗುದ್ದಿದೆ.

Car hit the BMTC bus and caught fire in Bengaluru
Car hit the BMTC bus and caught fire in Bengaluru
Car hit the BMTC bus and caught fire in Bengaluru

ಬಿಎಂಟಿಸಿ ಬಸ್ ಚಾಲಕ ಪ್ರಯಾಣಿಕರ ರಕ್ಷಣೆ ಮಾಡುವುದರ ಜೊತೆಗೆ ಬಿಎಂಟಿಸಿ ಬಸ್ ರಕ್ಷಣೆ ಸಹ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೆಂಕಿ ಹೊತ್ತಿದ್ದ ಕಾರು ಹಾಗೂ ಬಸ್ ಪರಸ್ಪರ ಸಿಕ್ಕಿ ಹಾಕಿಕೊಂಡಿದ್ದು ಅದನ್ನು ಬಿಡಿಸಲು ಬಸ್ ಚಾಲಕ ಪ್ರಯತ್ನ ಮಾಡಿದ್ದಾರೆ. ನೂರು ಮೀಟರ್ ಬಸ್ ಚಲಾಯಿಸಿ ಕಾರ್ನಿಂದ ಬಸ್ ಅನ್ನು ಕಾಪಾಡಿದ್ದಾರೆ. ಹೀಗಾಗಿ ಬಸ್ ಬೆಂಕಿಗಾಹುತಿಯಾಗುವುದು ತಪ್ಪಿದೆ. ಇಲ್ಲವಾದಲ್ಲಿ ನಡುರಸ್ತೆಯಲ್ಲಿ ಬಿಎಂಟಿಸಿ ಬಸ್ ಕೂಡ ಸುಟ್ಟು ಬಸ್ಮವಾಗುತ್ತಿತ್ತು. ಹೊತ್ತಿ ಉರಿಯುತ್ತಿರುವ ಬೆಂಕಿಯ ನಡುವೆಯೂ ಬಸ್ ಏರಿ ಬಸ್ ಚಲಾಯಿಸಿದ್ದಾರೆ.

ಸತತ ಒಂದೂವರೆ ನಿಮಿಷಗಳ ಹರಸಾಹಸದ ಬಳಿಕ ಡಿವೈಡರ್ ಹಾರಿಸಿ ಮತ್ತೊಂದು ರಸ್ತೆಗೆ ಚಲಾಯಿಸುವ ಮುಖಾಂತರ ಬಸನ್ನು ಕಾರಿನಿಂದ ಬಿಡಿಸುವಲ್ಲಿ ಚಾಲಕ ಗೌರೀಶ್ ಅವರು ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here