ಬೆಂಗಳೂರು:
ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ತೀರ್ಪಿನ ಸಂಬಂಧ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ನ್ಯಾಯಕ್ಕೆ ಜಯ ಸಿಗದಿರುವುದು ಅತ್ಯಂತ ದುರದೃಷ್ಟಕರ. ಪ್ರಜಾಪ್ರಭುತ್ವದ ಕೊಲೆಯಾಗಿದೆ. ಆದರೂ, ಇಡೀ ದೇಶ ಮತ್ತು ವಿರೋಧ ಪಕ್ಷಗಳು ರಾಹುಲ್ ಗಾಂಧಿಯ ಬೆಂಬಲಕ್ಕೆ ನಿಂತಿವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಬಜೆಟ್ ಅಧಿವೇಶನಕ್ಕೂ ಮುವ್ವ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ದೇಶಾದ್ಯಂತ ಹೋರಾಟ ನಡೆಸುತ್ತಿರುವ ಮಹಾನ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕರಿಗೆ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಲ್ಲಿ ನಿರ್ಬಂಧಿಸಲು ಬಯಸುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಇದಕ್ಕೆಲ್ಲಾ ಕುಗ್ಗುವುದಿಲ್ಲ. ಅವರು ಮತ್ತಷ್ಟು ಬಲಶಾಲಿಯಾಗಿ ಹೋರಾಟ ನಡೆಸುತ್ತಾರೆ ಎಂದು ಶಿವಕುಮಾರ್ ಹೇಳಿದ್ದಾರೆ.
ನಮ್ಮ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿ ಅದರ ತೀರ್ಪಿನ ಅನ್ವಯ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಬಿಜೆಪಿ ಕುತಂತ್ರ ಖಂಡಿಸಿ ಇಂದು ಮಧ್ಯಾಹ್ನ 3 ಗಂಟೆಗೆ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರೆಲ್ಲ ಪ್ರತಿಭಟನೆ ಮಾಡುತ್ತೇವೆ ಎಂದರು.
ರಾಹುಲ್ ಗಾಂಧಿ ಅವರ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ ನಡೆಸಿದ್ದು, ಇದನ್ನು ನಾವು ಖಂಡಿಸುತ್ತೇವೆ.
ರಾಹುಲ್ ಗಾಂಧಿ ಅವರು ದೇಶದ ಬಡವರ ಧ್ವನಿಯಾಗಿ, ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಹೋರಾಟ ಮಾಡುತ್ತಿದ್ದು, ಈ ಹೋರಾಟ ಹತ್ತಿಕ್ಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ದೇಶದ ಐಕ್ಯತೆ ಸಮಗ್ರತೆ ಹಾಗೂ ಶಾಂತಿ ಸ್ಥಾಪನೆಗೆ ಭಾರತ ಒಗ್ಗೂಡಿಸಲು ಮುಂದಾಗಿರುವ ನಮ್ಮ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಸಂಚು ರೂಪಿಸುತ್ತಿದೆ. ದೇಶದ ಎಲ್ಲಾ ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರ ಬೆನ್ನಿಗೆ ನಿಲ್ಲುತ್ತೇವೆ.
ರಾಹುಲ್ ಗಾಂಧಿ ಅವರ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಜನ ಸೂಕ್ತ ಉತ್ತರ ನೀಡುತ್ತಾರೆ. ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿಭಾಗೀಯ ಕೇಂದ್ರಗಳಲ್ಲಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡುತ್ತಿದ್ದೇನೆ. ಬೆಂಗಳೂರು ಕಾರ್ಯಕರ್ತರು ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಲು ತಿಳಿಸಿದ್ದೇವೆ ಎಂದರು.