Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಳಗಾವಿ
  • ಶೌರ್ಯ/ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
  • ಬೆಳಗಾವಿ

ಶೌರ್ಯ/ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

The Bengaluru Live December 16, 2021 1:00 PM 1 minute read
CM Bommai participating in Vijay Diwas in Belgaum

ಶೌರ್ಯ/ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಳಗಾವಿ:

ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ಇಂದು ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮುಖ್ಯಮಂತ್ರಿ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡುತ್ತಿದ್ದರು.

CM Bommai participating in Vijay Diwas in Belgaum

ಪರಮವೀರಚಕ್ರ ಪಡೆದವರಿಗೆ 25 ಲಕ್ಷದಿಂದ 1.5 ಕೋಟಿ ರೂ.ಗಳಿಗೆ, ಮಹಾವೀರಚಕ್ರ ವಿಜೇತರಿಗೆ 12 ಲಕ್ಷಕ್ಕೆ ಬದಲಾಗಿ 1.00 ಕೋಟಿ ರೂ.ಗಳು, ಅಶೋಕ ಚಕ್ರ ಪಡೆ ದವರಿಗೆ 25 ಲಕ್ಷ.ರೂಗಳಿಗೆ ಬದಲಾಗಿ 1.5 ಕೋಟಿ ರೂ.ಗಳು, ಕೀರ್ತಿ ಚಕ್ರ ಪಡೆವರಿಗೆ 1.00 ಕೋಟಿ ರೂ.ಗಳು, ವೀರಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಸೇನಾ/ನೌಕಾ/ ವಾಯು ಸೇನಾ ಮೇಡಲ್ ಪಡೆದವರಿಗೆ 15 ಲಕ್ಷ ರೂ.ಗಳು, ಮೆನ್ ಶನ್ ಎನ್.ಡಿ.ಎಸ್ ಪ್ಯಾಚ್ ಪಡೆದವರಿಗೆ 15 ಲಕ್ಷ ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಪ್ರಶಸ್ತಿ ವಿಜೇತರಿಗೆ ಸುಮಾರು ಐದು ಪಟ್ಟು ಅನುದಾನವನ್ನು ಹೆಚ್ವಿಸಲಾಗಿದೆ. ಅವರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಿ ಆದೇಶವನ್ನು ಹೊರಡಿಸಿದೆ. ಇದು ಸೇನೆಗೆ ನಾವು ಸಲ್ಲಿಸುವ ಗೌರವ. ನಿವೃತ್ತ ರಾದ ಮೇಲೆ ಉತ್ತಮ ಜೀವನ ನಡೆಸಲು ಹಾಗೂ ಸಾವನ್ನಪ್ಪಿದಾಗ ಸಹಾಯ ಮಾಡುತ್ತಾ ಬಂದಿದ್ದೇವೆ. ಪ್ರಶಸ್ತಿ ಪಡೆದಾಗಲು ಅವರನ್ನು ಗೌರವಿಸುವ ನಿಟ್ಟಿನಲ್ಲಿ ಅನುದಾನವನ್ನು ಹೆಚ್ವಿಸಲಾಗಿದೆ ಎಂದರು.

ದೇಶದ ತಾಂತ್ರಿಕ ಅಭಿವೃದ್ಧಿಗೆ ಸೇನಾಪಡೆಗಳ ಕೊಡುಗೆ ಸೇನಾಪಡೆಗಳು ದೇಶದ ರಕ್ಷಣೆ ಮಾತ್ರವಲ್ಲದೆ ಆಂತರಿಕ ಭದ್ರತೆಯನ್ನು ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ದೇಶದ ತಾಂತ್ರಿಕ ಬೆಳವಣಿಗೆ ಯಲ್ಲಿಯೂ ಸೇನಾಪಡೆಗಳು ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತವೆ. ಸೇನೆಯ ಬಗ್ಗೆ ನಮಗೆ ಅತ್ಯಂತ ಹೆಮ್ಮೆ ಇದೆ. ಪ್ರತಿ ಬಾರಿಯೂ ಗಡಿಯುದ್ದಕ್ಕೂ ಅವರು ಸವಾಲುಗಳನ್ನು ಎದುರಿಸುತ್ತಾರೆ ಪೂರ್ವ , ಪಶ್ಚಿಮ, ಉತ್ತರ ಗಡಿಗಳಾಗಲಿ, ಅವರಿಗೆ ಎದುರಾದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಶತ್ರುಪಡೆಗಳನ್ನು ಸೋಲಿಸಿದ್ದಾರೆ.

CM Bommai participating in Vijay Diwas in Belgaum

ವಿಶೇಷವಾಗಿ 1971 ರಲ್ಲಿ ನಡೆದ ಇಂಡೋ- ಪಾಕಿಸ್ತಾನ ಯುದ್ಧವು ನಮ್ಮ ಸೇನಾಪಡೆಯ ಶಕ್ತಿ, ಬುದ್ದಿವಂತಿಕೆ, ಶೌರ್ಯ ಹಾಗೂ ಮೂರು ರಕ್ಷಣಾ ಪಡೆಗಳ ನಡುವಿನ ಸಮನ್ವಯಕ್ಕೆ ಸಾಕ್ಷಿಯಾಗಿದೆ ಎಂದರು.

ಮಧ್ಯರಾತ್ರಿ ನಡೆದ ದಾಳಿಗೆ ವಾಯುಪಡೆ, ನೌಕಾ, ಸೇನಾ ಪಡೆಗಳು ಎಚ್ಚೆತ್ತು ಯುದ್ಧಕ್ಕೆ ಪ್ರತ್ಯುತ್ತರ ನೀಡಿತು. 13 ದಿನಗಳ ಕಾಲ ನಡೆದ ಯುದ್ಧದಲ್ಲಿ 3863 ಯೋಧರು ಸಾವಿಗೀಡಾಗಿ, 9000 ಕ್ಕೂ ಹೆಚ್ಚು ಯೋಧರು ಗಾಯಾಳುಗಳಾದರು. ಪಾಕಿಸ್ತಾನದ 90000 ಕ್ಕೂ ಹೆಚ್ವು ಸೈನಿಕರು ಶರಣಾಗಿ, ಭಾರತ ಜಯ ಗಳಿಸಿತು. ಇದು ಅತ್ಯುತ್ತಮ ಯುದ್ಧ ನಿರ್ವಹಣೆ ಯ ಪ್ರತೀಕ ಎಂದರು.

1971 ರಲ್ಲಿ ಭಾರತದ ಮಿಲಿಟರಿ ಶಕ್ತಿಯನ್ನು ಇಡೀ ವಿಶ್ವವೇ ತಿರುಗಿ ನೋಡುವಂತಾಯಿತು. ಯುದ್ಧದಲ್ಲಿ ಮಡಿದವರ ಶೌರ್ಯಕ್ಕೆ ಮುಖ್ಯಮಂತ್ರಿಗಳು ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.

ಮಿಲಿಟರಿಯಲ್ಲಿ ತಂತ್ರಜ್ಞಾನ ಬಳಕೆ ಇತ್ತೀಚೆಗೆ ವಿಶ್ವದಲ್ಲಿ ತಂತ್ರಜ್ಞಾನ ಬಳಕೆ ಮಿಲಿಟರಿಯಲ್ಲಿ ಹೆಚ್ಚಾಗಿದೆ. ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಭಾರತವೂ ಯಾವ ದೇಶಕ್ಕೂ ಕಡಿಮೆಯಿಲ್ಲ. ನಮ್ಮ ಪ್ರಧಾನಿಗಳೂ ಸಹ ಈ ನಿಟ್ಟಿನಲ್ಲಿ ಭಾರತವನ್ನು ಸಶಕ್ತಗೊಳಿಸಿದ್ದಾರೆ.

ವಿಜಯ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ ಸಂಗತಿಯಾಗಿದೆ. ಬಾಂಗ್ಲಾದೇಶವೂ ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಳ್ಳಲು ಸಾಧ್ಯ ವಾಗಿರುವುದು ಭಾರತದ ಸೇನೆಯ ಸಹಾಯದಿಂದಾಗಿ. ನಮ್ಮನ್ನು ದೇಶದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಗೆ ಮುಡಿಪಾಗಿಟ್ಟುಕೊಳ್ಳಬೇಕು. ಅದುವೇ ನಾವು ಸೇನಾಪಡೆಗಳಿಗೆ ಸಲ್ಲಿಸುವ ನಿಜ ನಮನ ಎಂದರು.

ವಿಜಯ್ ದಿವಸ್ ಅಂಗವಾಗಿ ಮುಖ್ಯಮಂತ್ರಿ @BSBommai ಅವರು ಇಂದು ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಗೃಹ ಸಚಿವ @JnanendraAraga, ಮೇಜರ್ ಜನರಲ್ ಜೆ.ವಿ.ಪ್ರಸಾದ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.#SwarnimVijayVarsh #VijayDiwas2021 #SwarnimVijayDiwas pic.twitter.com/KlwPrdvuJ4

— CM of Karnataka (@CMofKarnataka) December 16, 2021

ಇದೇ ಸಂದರ್ಭದಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಇತ್ತೀಚೆಗೆ ಮಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಎಲ್ಲರಿಗೂ ಶ್ರದ್ದಾಂಜಲಿ ಸಲ್ಲಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಮೇಜರ್ ಜನರಲ್ ಜೆ.ವಿ. ಪ್ರಸಾದ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಉತ್ತಮ ಮಾರುಕಟ್ಟೆಯಿಂದ ಗೃಹ ಹಾಗೂ ಗುಡಿ ಕೈಗಾರಿಕೆಗಳ ಆರ್ಥಿಕ ಅಭಿವೃದ್ಧಿ ಸಾಧ್ಯ : ಸಿಎಂ
Next: ಒತ್ತುವರಿ ಜಮೀನನ್ನು ಭೋಗ್ಯಕ್ಕೆ ಕೊಡಲು ಕಾಫಿ ಬೆಳೆಗಾರರ ಬೇಡಿಕೆ

Related Stories

ಬೆಂಗಳೂರಿನ ಜಾರಿ ನಿರ್ದೇಶನಾಲಯ ಕಚೇರಿಯ ಪ್ರವೇಶದ್ವಾರ — ಸಂಗ್ರಹ ಚಿತ್ರ
  • ಅಪರಾಧ
  • ಕರ್ನಾಟಕ
  • ಬೆಳಗಾವಿ

ಬೆಳಗಾವಿ ಹೂಡಿಕೆ ವಂಚನೆ ಪ್ರಕರಣ: ₹427.16 ಕೋಟಿ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಇಡಿ

The Bengaluru Live October 31, 2026 1:11 PM
ಕರ್ನಾಟಕದ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ ಭಾವಚಿತ್ರ.
  • ಬೆಂಗಳೂರು ನಗರ
  • ಕರ್ನಾಟಕ
  • ಬೆಳಗಾವಿ
  • ರಾಜಕೀಯ

ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ; ಸಿಎಂ ಸಂತಾಪ

The Bengaluru Live October 30, 2026 10:30 AM
ಅಕ್ಟೋಬರ್ 27ರಂದು ಬೆಳಗಾವಿಯ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಬಾಸ್ಕೆಟ್‌ಬಾಲ್ ಆಡುತ್ತಿರುವ ಕೆಡೆಟ್‌ಗಳು.
  • ಕರ್ನಾಟಕ
  • ಕ್ರೀಡೆ
  • ಬೆಳಗಾವಿ

ಬೆಳಗಾವಿಯಲ್ಲಿ ಐದು ಮಿಲಿಟರಿ ಶಾಲೆಗಳ 175 ಕೆಡೆಟ್‌ಗಳ ಕ್ರೀಡಾ–ಶೈಕ್ಷಣಿಕ ಸ್ಪರ್ಧೆ

The Bengaluru Live October 27, 2026 7:30 PM

Latest Post

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್ ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಕರ್ನಾಟಕ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

November 13, 2026 12:20 PM
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ರಾಜ್ಯಪಾಲರಾದ ಸುಧಾ ಯಾದವ್ ಉಪಸ್ಥಿತರಿದ್ದಾರೆ
  • ಕರ್ನಾಟಕ
  • ಬೆಂಗಳೂರು ನಗರ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು

November 13, 2026 12:17 PM
ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್ ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಕರ್ನಾಟಕ
  • ಬೆಂಗಳೂರು ನಗರ

ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್

November 13, 2026 8:24 AM
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್

November 13, 2026 2:51 AM
ಗೃಹಲಕ್ಷ್ಮಿ ಹಣ ಬೇರೆಡೆ ಬಳಕೆಯಾಗಿಲ್ಲ: ಆನೇಕಲ್ ತಾಲ್ಲೂಕು ಪಂಚಾಯಿತಿಯಲ್ಲಿ ₹1,111 ಕೋಟಿ ಇಟ್ಟಿರುವ ಆರೋಪ ತಳ್ಳಿಹಾಕಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ gruha-lakshmi-beneficiaries-file-photo-20261106
  • ಕರ್ನಾಟಕ

ಗೃಹಲಕ್ಷ್ಮಿ ಹಣ ಬೇರೆಡೆ ಬಳಕೆಯಾಗಿಲ್ಲ: ಆನೇಕಲ್ ತಾಲ್ಲೂಕು ಪಂಚಾಯಿತಿಯಲ್ಲಿ ₹1,111 ಕೋಟಿ ಇಟ್ಟಿರುವ ಆರೋಪ ತಳ್ಳಿಹಾಕಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

November 13, 2026 2:39 AM
ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಚಾರ ಮಾರ್ಗ ಬದಲಾವಣೆ, ಆರು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ ಬನ್ನೇರುಘಟ್ಟ ರಸ್ತೆ ಜಂಕ್ಷನ್‌ಗಳಿಗೆ ಡಿಪಿಆರ್: ಸುರಕ್ಷಿತ ಪಾದಚಾರಿ ಮಾರ್ಗ, ಕ್ರಾಸಿಂಗ್‌ಗೆ ಆದ್ಯತೆ
  • ಬೆಂಗಳೂರು

ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಚಾರ ಮಾರ್ಗ ಬದಲಾವಣೆ, ಆರು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ

November 12, 2026 11:24 PM

ನೀವು ತಪ್ಪಿಸಿಕೊಂಡಿರಬಹುದು

ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಕರ್ನಾಟಕ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

The Bengaluru Live November 13, 2026 12:20 PM
ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ರಾಜ್ಯಪಾಲರಾದ ಸುಧಾ ಯಾದವ್ ಉಪಸ್ಥಿತರಿದ್ದಾರೆ
  • ಕರ್ನಾಟಕ
  • ಬೆಂಗಳೂರು ನಗರ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು

The Bengaluru Live November 13, 2026 12:17 PM
ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಕರ್ನಾಟಕ
  • ಬೆಂಗಳೂರು ನಗರ

ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್

The Bengaluru Live November 13, 2026 8:24 AM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್

The Bengaluru Live November 13, 2026 2:51 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್
  • ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು
  • ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್
  • ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್
©Copyright 2025 The Bengaluru Live All rights reserved. | MoreNews by AF themes.