
ಮಂಡ್ಯ:
ನಾಡು, ನುಡಿ, ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು. ರಾಜ್ಯದ ರೈತರು, ಜನರಿಗೆ ಸಮಸ್ಯೆಯಾದರೆ ಎಲ್ಲರೂ ಒಂದಾಗಬೇಕು. ಪಕ್ಷದ ಭೇದಮರೆತು ಎಲ್ಲರೂ ಒಂದಾಗಿ ಹೋರಾಡಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಅವರು ಶನಿವಾರ ಹೇಳಿದರು.
ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ 4 ವರ್ಷ ಉತ್ತಮ ಮಳೆಯಾಗಿತ್ತು. ಈ ವರ್ಷ ರಾಜ್ಯದಲ್ಲಿ ಮಳೆ ಕೊರತೆಯಿಂದ ನೀರಿನ ಸಮಸ್ಯೆ ಇದೆ. ಈ ಬಗ್ಗೆ ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ಮನವರಿಕೆ ಮಾಡಬೇಕು. ಕಾವೇರಿ ನದಿ ನೀರಿನ ಸಮಸ್ಯೆ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ ಎಂದರು.