ಬೆಂಗಳೂರು:
ರಾಜ್ಯದಲ್ಲಿ ಕಾವೇರಿ ನದಿ ನೀರಿನ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಮಂಡ್ಯ, ರಾಮನಗರ ಮತ್ತು ಬೆಂಗಳೂರಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26ರಂದು ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿರುವುದು ಬಂದ್ ನಡೆಯುವುದು ನಿಶ್ಚಿತ. 150ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಿವೆ.ಮಂಗಳವಾರ ಬಂದ್‌ಗೆ ಸಾಕಷ್ಟು ಸಂಘ ಸಂಸ್ಥೆಗಳು ಬೆಂಬಲ ಕೊಟ್ಟಿವೆ ಎಂದು ಹೋರಾಟಗಾರರ ಸಭೆಯಲ್ಲಿ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವುದನ್ನು ಖಂಡಿಸಿ ಸೆಪ್ಟೆಂಬರ್ 26 ಕ್ಕೆ ಬೆಂಗಳೂರು ನಗರ ಬಂದ್‌ಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕರೆ ನೀಡಿದ್ದಾರೆ. ಎಲ್ಲ ಸಂಘ ಸಂಸ್ಥೆಗಳ ನಿರ್ಧಾರದ ಮೇರೆಗೆ ಘೋಷಣೆ ಮಾಡಲಾಗಿದೆ. ಎಲ್ಲ ತಾಲೂಕುಗಳಲ್ಲಿ ಬಂದ್ ಮಾಡುವ ಮೂಲಕ ಬಂದ್ ಗೆ ಬೆಂಬಲಿಸಬೇಕು ಎಂದು ತಿಳಿಸಿದ್ದಾರೆ.
ಬೆಂಗಳೂರು ಬಂದ್‌ಗೆ ತಮ್ಮ ಸಂಘಟನೆಯ ನೈತಿಕ ಬೆಂಬಲ ಇದೆ ಎಂದು ಬೆಂಗಳೂರಲ್ಲಿ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ ಹೇಳಿದ್ದಾರೆ.
ರಾಮನಗರವೂ ಬಂದ್: ಕಾವೇರಿ ನದಿ ನೀರನ್ನು ನಂಬಿಕೊಂಡಿರುವ ಮೈಸೂರು-ಮದ್ದೂರು ಭಾಗದ ಜೊತೆಗೆ ರಾಮನಗರ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್ 26ರಂದು ಬಂದ್ ಘೋಷಿಸಲಾಗಿದೆ.
ಅಂದು ಏನಿರಲ್ಲ?: ಹೋಟೆಲ್ಗಳು, ಆಟೋಗಳು ಸಿಗಲ್ಲ, ಟ್ಯಾಕ್ಸಿ ಓಡಾಡಲ್ಲ, ಓಲಾ, ಉಬರ್ ಸಿಗಲ್ಲ, ಬೀದಿಬದಿ ವ್ಯಾಪಾರ, ಪೆಟ್ರೋಲ್ ಬಂಕ್, ಶಾಲಾ, ಕಾಲೇಜು, ಬಿಬಿಎಂಪಿ ನೌಕರರು, ಬಿಎಂಟಿಸಿ ಬಸ್ ಸಂಶಯ. ಕೈಗಾರಿಕೆಗಳು, ವಾಣಿಜ್ಯೋದ್ಯಮ, ಚಿಕ್ಕಪೇಟೆ ಅಂಗಡಿಗಳು, ಕೆಎಸ್ ಆರ್ ಟಿಸಿ ಬಸ್, ಮಾರ್ಕೆಟ್ಗಳು ಬಂದ್ ಆಗಿರಲಿವೆ.
ಏನಿರುತ್ತೆ..?: ಅಗತ್ಯ ವಸ್ತುಗಳಾದ ಔಷಧ, ಆಸ್ಪತ್ರೆ, ಹಾಲು, ಪೇಪರ್ ತೆರೆದಿರುತ್ತದೆ.